ಮಹಾರಾಜರ ಅಂತಿಮ ಸಂಸ್ಕಾರಕ್ಕೆ 250 ಕೆಜಿ ಶ್ರೀಗಂಧ
ಮೈಸೂರು, ಡಿ. 11 :ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ಆರಂಭವಾಗಿದೆ.ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಮಧುವನದಲ್ಲಿ ಅಂತಿಮ ಸಂಸ್ಕಾರಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸುಮಾರು 250 ಕೆಜಿ ಶ್ರೀಗಂಧವನ್ನು ಅಂತಿಮ ಸಂಸ್ಕಾರಕ್ಕೆ ಬಳಕೆ ಮಾಡಲಾಗುತ್ತಿದೆ. ಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಅಂಭಾವಿಲಾಸ ಅರಮನೆಯಲ್ಲಿ ಒಡೆಯರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಮಧ್ಯಾಹ್ನ 1.30ರ ಸುಮಾರಿಗೆ ಅರಮನೆಯಿಂದ ಒಡೆಯರ್ ಪಾರ್ಥಿವ ಶರೀರದ ಮೆರವಣಿಗೆ ಹೊರಡುತ್ತದೆ. ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿಸುವ ಮೂಲಕ ಪಾರ್ಥಿವ ಶರೀರವನ್ನು ಅಂತ್ಯ ಸಂಸ್ಕಾರ ನಡೆಯುವ ಮಧುವನಕ್ಕೆ ತರಲಾಗುತ್ತದೆ. (ಒಡೆಯರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ)

ಮಧುವನದಲ್ಲಿ ನಡೆಯುವ ಅಂತಿಮ ಸಂಸ್ಕಾರದಲ್ಲಿ ರಾಜಮನೆತನದವರು, ಗಣ್ಯರು ಮತ್ತು ಮಾಧ್ಯಮಗಳು ಮಾತ್ರ ಭಾಗವಹಿಸಬಹುದಾಗಿದೆ. ಅರಮನೆಯಿಂದ ಹೊರಡುವ ಪಾರ್ಥಿವ ಶರೀರಿದ ಮೆರವಣಿಗೆ 4 ಗಂಟೆ ಸುಮಾರಿಗೆ ಮಧುವನಕ್ಕೆ ಆಗಮಿಸಬಹು ಎಂದು ಅಂದಾಜಿಸಲಾಗಿದೆ. ಸುಮಾರು 45 ನಿಮಿಷಗಳ ವಿಧಿವಿಧಾನಗಳ ನಂತರ ಸುಮಾರು 5 ಗಂಟೆಗೆ ಚಿತೆಗೆ ಅಗ್ನಿ ಸ್ಪರ್ಶ ಮಾಡಬಹುದು ಎಂದು ತಿಳಿದು ಬಂದಿದೆ. (ಅಳಿವಿನ ಅಂಚಿನಲ್ಲಿ ಆಳರಸರ ಮಧುವನ)
ವಿಧಿವಿಧಾನಗಳು : ಮೃತದೇಹ ಮಧುವನಕ್ಕೆ ಆಗಮಿಸುತ್ತಿದ್ದಂತೆ ಮೊದಲು ಪಂಚದ್ರವ್ಯದ ಅಭಿಷೇಕ ನಡೆಯಲಿದೆ. ನಂತರ ಶ್ರೀಗಂಧ ಮತ್ತು ಚಂದನದ ಅಲಂಕಾರ ನಡೆಯಲಿದೆ. ಭಾನುಪ್ರಕಾಶ್ ಅಂತಿಮ ವಿಧಿವಿಧಾನಗಳ ನೇತೃತ್ವ ವಹಿಸಿದ್ದಾರೆ. ಅರಮನೆ ಆವರಣದಲ್ಲಿ ಗೋದಾನ, ಎರಡು ಬಗೆಯ ಹೋಮಗಳನ್ನು ಮಾಡಲಾಗುತ್ತಿದೆ.
ಪೊಲೀಸ್ ಸರ್ಪಗಾವಲು : ಒಡೆಯರ್ ಅಂತ್ಯ ಸಂಸ್ಕಾರ ನಡೆಯುವ ಮಧುವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗಣ್ಯರು ಆಗಮಿಸುತ್ತಿರುವುದರಿಂದ ಮಂಡ್ಯ ಮತ್ತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ವತಃ ಬಂದೋಬಸ್ತ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications