ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಮತ್ತೆ ಅಧಿಕಾರಿ ಎತ್ತಂಗಡಿ: ಡಿಎಚ್ಒ ಡಾ. ಅಮರನಾಥ್ ವರ್ಗಾವಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 18: ಮೈಸೂರಿನಲ್ಲಿ ಪರಸ್ಪರ ಬೀದಿ ಜಗಳಕ್ಕೆ ಇಳಿದಿದ್ದ ಐಎಎಸ್ ಅಧಿಕಾರಿಗಳ ಎತ್ತಂಗಡಿ ನಂತರ ಈಗ ಮತ್ತೊಬ್ಬ ಹಿರಿಯ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ವಿಧಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕೋವಿಡ್ ವಿಕೋಪ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ ಎನ್ನುವ ಕಾರಣಕ್ಕೆ ಈತನಕ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಮರನಾಥ್‌ರನ್ನು ಸರಕಾರ ವರ್ಗಾವಣೆ ಮಾಡಿದೆ. ಇವರ ಜಾಗಕ್ಕೆ ಆರೋಗ್ಯ ಇಲಾಖೆ ವಿಭಾಗಿಯ ಉಪ ನಿರ್ದೇಶಕ ಡಾ.ಕೆ.ಎಚ್. ಪ್ರಸಾದ್‌ರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರಿನಲ್ಲಿ ಕೋವಿಡ್ ಡೆತ್ ರೇಟ್ ಹೆಚ್ಚಳ: ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿಮೈಸೂರಿನಲ್ಲಿ ಕೋವಿಡ್ ಡೆತ್ ರೇಟ್ ಹೆಚ್ಚಳ: ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ, ಸಾವು ಅಧಿಕಗೊಳ್ಳಲು ಸೂಕ್ತ ನಿರ್ವಹಣೆ ಕೊರತೆಯೇ ಕಾರಣ ಎನ್ನಲಾಗಿತ್ತು. ಅಲ್ಲದೆ ಪರಿಸ್ಥಿತಿ ನಿರ್ವಹಣೆ ವಿಚಾರವಾಗಿ ಆರೋಗ್ಯಾಧಿಕಾರಿ ಅಮರನಾಥ್ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರಿಗೆ ಕಾಲಕಾಲಕ್ಕೆ ಮಾಹಿತಿ ಕೊಟ್ಟು ಸಮನ್ವಯ ಮಾಡುವುದರಲ್ಲೂ ಅಮರನಾಥ್ ವಿಫಲರಾಗಿದ್ದರು ಎನ್ನುವ ಮಾಹಿತಿ ಸರಕಾರಕ್ಕೆ ಹೋಗಿತ್ತು.

Mysuru District Health Officer Dr. Amarnath Transferred

ಸದ್ಯ ನೇಮಕಗೊಂಡಿರುವ ಡಾ. ಪ್ರಸಾದ್ ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದ ಸುಳ್ವಾಡಿ ಪ್ರಸಾದ ತಿಂದು ಬಲಿಯಾದ ದುರಂತದಲ್ಲಿ ಸಕಾಲಿಕವಾಗಿ ಕಾರ್ಯನಿರ್ವಹಿಸಿದ್ದರು. ಆ ಮೂಲಕ ನೂರಾರು ಜನರನ್ನು ಬದುಕುಳಿಯುವಂತೆ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಕೋವಿಡ್‌ನಂಥ ವಿಕೋಪ ಸ್ಥಿತಿ ನಿರ್ವಹಣೆಗಾಗಿ ಪ್ರಸಾದ್ ಅವರನ್ನು ಮೈಸೂರು ಜಿಲ್ಲೆಯ ನೂತನ ಆರೋಗ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

English summary
Mysuru District Health Officer Dr. Amarnath has been transferred.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X