ಮೈಸೂರು: 15 ಸ್ಟೆನೊಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು, ಜ.15: ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಯಲ್ಲಿ 15 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜ.19 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದ್ದು, ಉತ್ತಮ ಟೈಪಿಂಗ್ ಕೌಶಲ್ಯ ಹೊಂದಿರಬೇಕು. ಆನ್ ಲೈನ್ ಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಅಗತ್ಯ ದಾಖಲೆ ಭರ್ತಿ ಮಾಡಿ ಸಲ್ಲಿಸಬೇಕು.[ಮಂಡ್ಯ: ಜಿಲ್ಲಾ ಮತ್ತು ಸತ್ರ ಜಡ್ಜ್ ಕಚೇರಿಯಲ್ಲಿ ವಿವಿಧ ಹುದ್ದೆಗಳಿವೆ]

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಮೈಸೂರು ಹುದ್ದೆಗಳ ವಿವರ:
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ: 15 ಸ್ಟೆನೊಗ್ರಾಫರ್
ಅಂತರ್ಜಾಲ ತಾಣ: www.ecourts.gov.in
ವಿದ್ಯಾರ್ಹತೆ:
ಎಸೆಸ್ಸೆಲ್ಸಿ ಪಾಸಾಗಿರಬೇಕು
ವಿಶೇಷ ಅರ್ಹತೆ: ಸ್ಟೆನೋಗ್ರಾಫಿ ಹಾಗೂ ಟೈಪಿಂಗ್ ಜ್ಞಾನ ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ಬಗೆ
* ಅಗತ್ಯ ಮಾಹಿತಿ ಭರ್ತಿ ಮಾಡಿ ದಾಖಲೆಗಳೊಂದಿಗೆ ನೇರವಾಗಿ ಇಲ್ಲವೇ ಆನ್ ಲೈನ್ ಮೂಲಕವೂ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಮೈಸೂರು
ವಯೋಮಿತಿ:
* ಸಾಮಾನ್ಯ ವರ್ಗ: 18-35 ವರ್ಷ
* 2ಎ, 3ಎ: 18-38 ವರ್ಷ
* ಪ.ಜಾತಿ, ಪ.ಪಂಗಡ, ಪ್ರ ವರ್ಗ 1 : 18-40 ವರ್ಷ
* ಕೊನೆ ದಿನ: ಜನವರಿ 19, 2015
* ಅಂಗವಿಕಲರಿಗೆ, ವಿಧವೆಯರಿಗೆ ಮತ್ತು ಸೈನಿಕರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿ











Click it and Unblock the Notifications