ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಗೆ ಕೊರೊನಾ ಸೋಂಕು
ಮೈಸೂರು, ಆಗಸ್ಟ್ 18: ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಇತ್ತೀಚೆಗೆ ಎಸ್‌ಪಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
Recommended Video
ಕೊರೊನಾ ವಾರಿಯರ್ಸ್ ಗಳಾಗಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಗಲು-ರಾತ್ರಿ ಶ್ರಮಿಸುತ್ತಿರುವ ಪೊಲೀಸರಿಗೆ ಕೊರೊನಾ ಸೋಂಕು ತಗುಲುವ ಸರಣಿ ಮುಂದುವರೆದಿದೆ.
ಇತ್ತೀಚಿಗೆ ಬೆಳಗಾವಿ, ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ನಂತರ, ಇದೀಗ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರಿಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಕಚೇರಿ ಸಿಬ್ಬಂದಿಯ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಸೋಮವಾರ ಸಿ.ಬಿ ರಿಷ್ಯಂತ್ ಅವರು ಸ್ಕ್ವಾಬ್ ಪರೀಕ್ಷೆಗೆ ಒಳಗಾಗಿದ್ದರು. ಇದರಿಂದ ಎಸ್‌ಪಿ ರಿಷ್ಯಂತ್ ಅವರಿಗೂ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಆದರೆ, ಸೋಂಕಿಗೆ ಸಂಬಂಧಿಸಿದ ಯಾವುದೇ ಲಕ್ಷಣಗಳು ಅವರಲ್ಲಿ ಕಂಡುಬಂದಿಲ್ಲ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ.












Click it and Unblock the Notifications