ತಿನ್ನುವ ಅಕ್ಕಿ & ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ- ಕೇಂದ್ರದ ನಡೆಗೆ ಡಿಕೆಶಿ ಬೇಸರ

ಮೈಸೂರು, ಜೂನ್‌ 15: ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಬರುವ ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಪೊಲೀಸ್‌ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಕೇಂದ್ರ ಸರ್ಕಾರ ತಿರಸ್ಕರಿಸಿರುವ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು.

DK Shivakumar Reacted On Central Government

ಅವರೇನು ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ. ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ 10ಕೆಜಿ ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ. ಹೀಗಾಗಿ ಸಿಎಂ ಈಗಾಗಲೇ ಛತ್ತಿಸ್‌ಗಡ್, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ಹೋರಾಟದ ಮುಂದಿನ ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದರು.

DK Shivakumar Reacted On Central Government

ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ಮಾಡಬೇಕೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಓಪನ್ ಮಾರ್ಕೆಟ್‌ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ ಬೆಟ್ಟು ಮಾಡಿ ತೋರಿಸಿಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರದ ನಿಲುವನ್ನು ಖಂಡಿಸುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+