Chamundi Hill: ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಬಗ್ಗೆ ಸಂಸದ ಯದುವೀರ್ ಹೇಳಿದ್ದೇನು ಗೊತ್ತಾ?
Chamundi Hill: ನಾಡದೇವತೆ ಮೈಸೂರು ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರದ ಬಗ್ಗೆ ಇಂದು (ಆಗಸ್ಟ್ 15) ಮೈಸೂರು ಹಾಗೂ ಕೊಡಗು ಸಂಸದ, ರಾಜವಂಶದ ಕುಡಿ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರದ ಬಗ್ಗೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.

ಮೈಸೂರು ಅರಮನೆಯಲ್ಲಿ ಸಂಪ್ರದಾಯದಂತೆ ಖಾಸಗಿ ದಸರಾವನ್ನು ಮೈಸೂರು ರಾಜಮನೆತನದವರು ನಡೆಸಲಿದ್ದಾರೆ. ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು. ಇನ್ನು ಬಿಜೆಪಿ ಮತ್ತು ಜೆಡಿಎಸ್‌ನ ಮೈಸೂರು ಪಾದಯಾತ್ರೆ ಯಶಸ್ವಿ ಆಗಿದೆ. ಪಕ್ಷದಲ್ಲಿನ ಬಂಡಾಯ ಚಟುವಟಿಕೆಗಳ ಬಗ್ಗೆ ನನಗೇನೂ ಗೊತ್ತಿಲ್ಲ. ಎಲ್ಲರಿಗೂ ನನ್ನ ಸಲಹೆ ಏನೆಂದರೆ ನಾವು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿದರು.
ಯಾವುದೇ ಬದಲಾವಣೆಗಳಿಲ್ಲದೆ, ಖಾತರಿ ಯೋಜನೆಗಳನ್ನು ಮುಂದುವರೆಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಖಾತ್ರಿ ಯೋಜನೆಗಳ ಭರವಸೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದೀಗ ಅದು ಯೋಜನೆಗಳನ್ನು ಮಾರ್ಪಡಿಸಬಾರದು ಎಂದು ಹೇಳಿದರು.
ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಯನ್ನು ಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಯದುವೀರ್ ಸಲಹೆ ನೀಡಿದರು.
ಹರಿದುಬಂದ ಪ್ರವಾಸಿಗರ ದಂಡು: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಮೂಲಗಳು ತುಂಬಿ ಹರಿಯುತ್ತಿವೆ. ಹಾಗೆಯೇ ಉತ್ತಮ ಮಳೆ ಹಾಗೂ ಕಾವೇರಿ ಹೊರಹರಿವಿನ ಪರಿಣಾಮ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಭೋರ್ಗರೆಯುತ್ತಿದ್ದು, ಕಾವೇರಿ ರುದ್ರ ನರ್ತನ ಕಾಣಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.
ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತದಲ್ಲಿ ಕಲ್ಲು ಬಂಡೆಗಳ ನಡುವೆ ನೀರು ಹರಿಯುವ ಜಲ ವೈಯ್ಯಾರ ಕಾಣಲು ಪ್ರವಾಸಿಗರ ದಂಡೇ ಹರಿದುಬಂದಿದ್ದು, ತೆಪ್ಪ ಸವಾರಿ ನಡೆಸಿ ಕಾವೇರಿ ಜಲವೈಭವ ಕಣ್ತುಂಬಿಕೊಂಡರು.
ತಮಿಳುನಾಡು ಮತ್ತು ಕರ್ನಾಟಕ ಎರಡು ಭಾಗದಲ್ಲಿ ಭಾನುವಾರ ಆದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದು, ಭೋರ್ಗರೆದು ಹರಿಯುವ ಜಲರಾಶಿ ನಡುವೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿದ್ದು ಕಂಡುಬಂದಿತು. ಕಲ್ಲು ಬಂಡೆಗಳ ಮೇಲೆ ಕುಳಿತ ಪ್ರವಾಸಿಗರು ನೀರಿನ ರಭಸ ಕಂಡು ಬೆರಗಾಗಿದ್ದಾರೆ.
ಇನ್ನು ಅಪಾಯಕಾರಿ ಮಟ್ಟದಲ್ಲಿ ಕಾವೇರಿ ಹರಿಯುತ್ತಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಕೆಲ ದಿನಗಳಿಂದ ಪ್ರವಾಸಿಗರಿಗೆ ಅವಕಾಶ ನೀಡಿದ ಹಿನ್ನೆಲೆ ವೀಕೆಂಡ್‌ನಲ್ಲಿ ಪ್ರವಾಸಿಗರು ಮಜಾ ಮಾಡುತ್ತಿದ್ದಾರೆ.












Click it and Unblock the Notifications