ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ವೈದ್ಯರ ಮುಷ್ಕರ ವಾಪಸ್, ಉಸ್ತುವಾರಿ ಸಚಿವರಿಂದ ಧನ್ಯವಾದ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 23: ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯರು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಧನ್ಯವಾದ ಹೇಳಿರುವ ಸಚಿವರು, ""ಕಳೆದ ನಾಲ್ಕೈದು ತಿಂಗಳಿನಿಂದ ಕೋವಿಡ್-19 ಮಹಾಮಾರಿ ವಿರುದ್ಧ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಜಿಲ್ಲಾಡಳಿತ ಸೇರಿದಂತೆ ಅನೇಕ ಇಲಾಖೆಗಳ ತಂಡದವರು ಅವಿರತವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಇದು ಎಂದಿಗೂ ಸ್ಮರಣೀಯವಾಗಿದ್ದು, ಯಾರೂ ಎಂದೂ ಸಹ ಇದನ್ನು ಮರೆಯಲಾಗದು'' ಎಂದು ತಿಳಿಸಿದ್ದಾರೆ.

ನಂಜನಗೂಡು ಟಿಹೆಚ್ಒ ಆತ್ಮಹತ್ಯೆ ಪ್ರಕರಣ: ಕೊನೆಗೂ ಮುಷ್ಕರ ಕೈಬಿಟ್ಟ ವೈದ್ಯರುನಂಜನಗೂಡು ಟಿಹೆಚ್ಒ ಆತ್ಮಹತ್ಯೆ ಪ್ರಕರಣ: ಕೊನೆಗೂ ಮುಷ್ಕರ ಕೈಬಿಟ್ಟ ವೈದ್ಯರು

""ಇನ್ನು ಕೋವಿಡ್ ಸಂದರ್ಭದಲ್ಲಿ ವೈದ್ಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಎರಡು ದಿನಗಳಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ, ಈ ಎಲ್ಲ ಸಮಸ್ಯೆಗಳು ಸರ್ಕಾರದ ಅರಿವಿಗೆ ಬಂದಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬೇಡಿಕೆಗಳನ್ನು ಈಡೇರಿಸಲು ಭರವಸೆ ನೀಡಿದ್ದಾರೆ'' ಎಂದಿದ್ದಾರೆ.

Doctors Strike Abandoned: Thanks From Mysuru District In Charge Minister ST Somashekhar

""ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್ ಪಡೆದಿರುವ ವೈದ್ಯರ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಜೊತೆಗೆ ರಾಜ್ಯ ಮತ್ತು ಮೈಸೂರು ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೀಗಾಗಿ ಕೋವಿಡ್ ಸನ್ನಿವೇಶದಲ್ಲಿ ಜನರ ಆರೈಕೆಗೆ ಮತ್ತೆ ಮುಂದಾಗುತ್ತಿರುವುದಕ್ಕೆ ಅಭಿನಂದನೆಯನ್ನು ತಿಳಿಸುತ್ತೇನೆ'' ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

English summary
Doctors have withdrawn a protest in Mysore for two days. Mysuru District In Charge Minister ST Somashekhar thanked the doctors for this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X