ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರದಕ್ಷಿಣೆ ಕಿರುಕುಳ: ಹುಣಸೂರಲ್ಲಿ ಗರ್ಭಿಣಿ ಆತ್ಮಹತ್ಯೆ

|
Google Oneindia Kannada News

ಮೈಸೂರು, ಮಾರ್ಚ್ 08: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕಲ್ಕುಣಿಕೆ ಗ್ರಾಮದಲ್ಲಿ ನಡೆದಿದೆ.

10 ತಿಂಗಳ ಹಿಂದೆ ಮದುವೆಯಾಗಿದ್ದ 23 ವರ್ಷದ ಲಕ್ಷ್ಮೀ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯೋಗೇಶ್ ಎಂಬುವವರ ಜೊತೆಗೆ ಮದುವೆಯಾಗಿದ್ದು, ನಿವೇಶನ ಕೊಡುವುದಾಗಿ ಹೇಳಲಾಗಿತ್ತು. ಆದರೆ ನಿವೇಶನ ನೀಡಲು ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಗಂಡನ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

Dowry Harassment: Pregnant Woman Suicide In Hunsur

ಚಿನ್ನ, 50 ಲಕ್ಷ ರುಪಾಯಿ ವರದಕ್ಷಿಣೆ ನೀಡಿ ಮದುವೆ ಮಾಡಲಾಗಿದ್ದು, ಒಂದು ನಿವೇಶನ ನೀಡುವುದು ವಿಳಂಬವಾಗಿತ್ತು. ಇದರಿಂದ ಪತಿ ಮನೆಯವರು ಪ್ರತಿದಿನ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಮನನೊಂದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದು, ಹುಣಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
Dowry harassment to pregnant woman in Husband home and she suicide. this happened in Kalkunike village, Hunsur Taluk, Mysuru District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X