ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಮೈಸೂರು, ಅಕ್ಟೋಬರ್ 17: ಚಾಮುಂಡಿ ಬೆಟ್ಟದಲ್ಲಿ ನಡೆದ ಸಮಾರಂಭದಲ್ಲಿ ಸಂದ ಶುಭ ಮುಹೂರ್ತದಲ್ಲಿ ಇಂದು ಜಯದೇವ ಹೃದ್ರೋಗ ಘಟಕದ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು, ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.
ಉದ್ಘಾಟನೆಯ ನಂತರ ಸಿಎಂ ಹಾಗೂ ಡಾ.ಮಂಜುನಾಥ್ ಅವರು ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಕೊರೊನಾ ವಾರಿಯರ್ ಗಳಾದ ಡಾ.ಟಿ.ಆರ್. ನವೀನ್, ಹಿರಿಯ ಶುಶ್ರೂಷಕಿ ರುಕ್ಮಿಣಿ, ಪೊಲೀಸ್ ಕಾನ್ ಸ್ಟೇಬಲ್ ಕುಮಾರ್, ಪೌರಕಾರ್ಮಿಕ ಮಹಿಳೆ ಮರಗಮ್ಮ, ಆಶಾ ಕಾರ್ಯಕರ್ತೆ ನೂರ್ ಜಾನ್, ಸಮಾಜ ಸೇವಕ ಅಯೂಬ್ ಅಹಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಎಚ್. ವಿಶ್ವನಾಥ್, ಮೇಯರ್ ತಸ್ನೀಮ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.












Click it and Unblock the Notifications