ಕನ್ನಡಿಗರಿಗೆ ವಿಶೇಷ ಮನವಿ ಮಾಡಿದ ಸಚಿವ ಡಾ. ಎಚ್‌.ಸಿ ಮಹದೇವಪ್ಪ

ಕನ್ನಡ ಭಾಷೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ. ಪ್ರಾಚೀನ ಕಾಲದಿಂದಲು ಕನ್ನಡದ ಬಳಕೆ ಇರುವುದು ಶಾಸನಗಳಿಂದ ತಿಳಿಯುತ್ತದೆ. ಕಾವೇರಿಯಿಂದ ಗೋದಾವರಿವರೆಗೂ ಕನ್ನಡ ಭಾಷೆ ಮಾತನಾಡುವವರು ಇದ್ದರು ಎಂದು ಇತಿಹಾಸ ತಿಳಿಸುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಇಂದು ಕರ್ನಾಟಕ ಏಕೀಕರಣವಾದ ದಿನ. ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1 ರಂದು ಏಕೀಕರಣ ಮಾಡಲಾಯಿತು ಎಂದರು.

Dr HC Mahadevappa Special request to kannadigas on kannada Rajyotsava

21 ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನೀಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ, ಆದ್ದರಿಂದ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.

ನಮ್ಮ ನಾಡು-ನುಡಿ ಹಾಗೂ ಸಂಸ್ಕೃತಿಗೆ ಸುಮಾರು 2000 ವರ್ಷಗಳ ಭವ್ಯ ಇತಿಹಾಸವಿದೆ. ದೇಶದ ಸಾಹಿತ್ಯದಲ್ಲಿ ಮತ್ತು ಭಾಷಾ ಲೋಕದಲ್ಲಿ ಕನ್ನಡ ಹಾಗೂ ಕರ್ನಾಟಕ ಅತ್ಯುನ್ನತವಾಗಿ ಬಣ್ಣಿಸಲ್ಪಟ್ಟಿದೆ. ಕನ್ನಡ ಭಾಷೆಯು ಹಲವು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವುದು ನಮ್ಮ ಸಾಹಿತ್ಯ, ಭಾಷಾ ಶ್ರೀಮಂತಿಕೆಯನ್ನು ತೋರಿಸುತ್ತಿದೆ ಎಂದರು.

ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಇಂದು ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಇದನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ನಾವೆಲ್ಲರೂ ಮುಂದಾಗಬೇಕಾಗಿದೆ. ಕನ್ನಡ ಭಾಷೆಯ ಶ್ರೀಮಂತಗೊಳಿಸುವಿಕೆಯೊoದಿಗೆ ಸಾಹಿತ್ಯ ಹಾಗೂ ಸಂಸ್ಕೃತಿಗಳ ಉತ್ತೇಜನಕ್ಕೂ ನಮ್ಮ ಸರಕಾರವು ಸಾಕಷ್ಟು ಒತ್ತು ನೀಡಿದೆ. ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆಯು ಹಿಂದುಳಿಯದoತೆ ಸರಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಮೊಬೈಲ್‌ನಲ್ಲಿ ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾoಶಗಳನ್ನು ಅಭಿವೃದ್ಧಿಪಡಿಸಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿರುತ್ತದೆ. ವಿಜ್ಞಾನ-ತಂತ್ರಜ್ಞಾನದ ಜೊತೆ ಜೊತೆಗೂ ಕನ್ನಡವನ್ನು ಬಳಸಿ, ಬೆಳೆಸಬೇಕಾಗಿದೆ, ಕನ್ನಡದ ಅಸ್ಮಿತೆಯನ್ನು ಕಟ್ಟುವಂತಹ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+