ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Vishnuvardhan Memorial: ಇಂದು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ, ವಿಷ್ಣು ಅಭಿಮಾನಿಗಳ ಅಸಮಾಧಾನವೇನು?

ಮೈಸೂರಿನ ಹಾಲಾಳು ಗ್ರಾಮದಲ್ಲಿ ನಟ ವಿಷ್ಣುವರ್ಧನ್ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ಬೆನ್ನಲ್ಲೇ ವಿಷ್ಣು ಅಭಿಮಾನಿಗಳು ಅಸಮಾಧಾನ ಹೊರ ಹಾಕಿರುವುದು ಏಕೆ ಎಂದು ಮುಂದೆ ಓದಿ..

|
Google Oneindia Kannada News

ಬೆಂಗಳೂರು, ಜನವರಿ. 27: ಸತತ ಹದಿಮೂರು ವರ್ಷಗಳ ನಂತರ ನಾಡಿನ ಮೇರುನಟ, ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸರ್ಕಾರ ಮುಂದಾಗಿದ್ದು, ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಆದರೆ, ಕಾರ್ಯಕ್ರಮಕ್ಕೂ ಮುನ್ನ ವಿಷ್ಣು ಸೇನಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಕೋಟ್ಯಂತರ ಅಭಿಮಾನಿಗಳು ಮತ್ತು ಕುಟುಂಬದ ಬಹು ದೊಡ್ಡ ಕನಸಾಗಿದ್ದ ವಿಷ್ಣು ಸ್ಮಾರಕ ಜನವರಿ 29ರ ಭಾನುವಾರ ಉದ್ಘಾಟನೆಗೊಳ್ಳಲಿದೆ. ಆದರೆ ಡಾ.ವಿಷ್ಣು ಸೇನಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

Vishnuvardhan memorial: ನಟ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ದಿನ ನಿಗದಿVishnuvardhan memorial: ನಟ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ದಿನ ನಿಗದಿ

ವಿಷ್ಣುವರ್ಧನ್ ಅಭಿಮಾನಿಗಳ ಪರವಾಗಿ ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

Dr Vishnuvardhan Memorial: cm basavaraj bommai to inaugurate Vishnuvardhan memorial

" ನಮ್ಮ ಹೋರಾಟ, ನೋವು ಮತ್ತು ಸ್ಮಾರಕಕ್ಕಾಗಿ ಕಾಯುವಿಕೆಯ 13 ವರ್ಷಗಳ ನಂತರ ಡಾ. ವಿಷ್ಣುವರ್ಧನ್ ಸ್ಮಾರಕವನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಇದಕ್ಕಾಗಿ ಕುಟುಂಬಸ್ಥರು ಸಾಕಷ್ಟು ಹೋರಾಟ ನಡೆಸಿದ್ದು ಅವರಿಂದಲೇ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುತ್ತಾರೆ. ಕಾರ್ಯಕ್ರಮಕ್ಕೆ ಚಿತ್ರರಂಗದವರನ್ನು ಆಹ್ವಾನಿಸುವ ಕೆಲಸ ನಡೆಯುತ್ತಿದೆ. ಫೆಬ್ರವರಿಯಲ್ಲಿ ಸ್ಮಾರಕಕ್ಕೆ ಭೇಟಿ ನೀಡುವುದಾಗಿ ನಟ ಸುದೀಪ್ ಹೇಳಿದ್ದಾರೆ. ಯಶ್ ಅವರನ್ನು ಆಹ್ವಾನಿಸಬೇಕು" ಎಂದು ವೀರಕಪುತ್ರ ಶ್ರೀನಿವಾಸ್ ಹೇಳಿದ್ದಾರೆ.

"ಚಿತ್ರರಂಗದ ಮಹಾನ್ ನಟ, ಪಂಚಭಾಷಾ ತಾರೆಯಾಗಿದ್ದ ವಿಷ್ಣು ಅವರ ಸ್ಮಾರಕ ಉದ್ಘಾಟನೆಗೆ ಅಕ್ಷಯ್ ಕುಮಾರ್, ಚಿರಂಜೀವಿ, ಮೋಹನ್ ಲಾಲ್, ರಜನಿಕಾಂತ್ ಅವರಂತಹ ಅವರ ಅನೇಕ ಸ್ನೇಹಿತರನ್ನು ಸರ್ಕಾರ ಆಹ್ವಾನಿಸುತ್ತದೆ ಎಂದು ಭಾವಿಸಿದ್ದೆ. ಆದರೆ ಆ ಕೆಲಸ ಆಗಿಲ್ಲ. ಇದು ಅಭಿಮಾನಿಗಳಾದ ನಮಗೆ ಬೇಸರ ತಂದಿದೆ. ವಿಷ್ಣು ಸ್ಮಾರಕ ಉದ್ಘಾಟನೆ ವಿಚಾರದಲ್ಲಿ ಸರ್ಕಾರ ಇತರೆ ನಟರ ಕಾರ್ಯಕ್ರಮಗಳಿಗೆ ನೀಡುವ ಮನ್ನಣೆ ನೀಡುತ್ತಿಲ್ಲ" ಎಂದು ವಿಷ್ಣು ಸೇನಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

"ಕನ್ನಡ ಚಿತ್ರರಂಗದ ಹಿರಿಯ, ಕಿರಿಯ, ಸ್ಟಾರ್ ನಟರು ಕೂಡ ಸ್ಮಾರಕದ ಬಗ್ಗೆ ಮಾತನಾಡುತ್ತಿಲ್ಲ. ಸ್ಮಾರಕ ಉದ್ಘಾಟನೆ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ಘೋಷಿಸಬೇಕು. ಅಲ್ಲದೆ, ಅಭಿಮಾನಿಗಳು ತಮ್ಮ ದೇಗುಲವನ್ನು ಅಭಿವೃದ್ಧಿಪಡಿಸಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ" ಎಂದು ವೀರಕಪುತ್ರ ಶ್ರೀನಿವಾಸ್ ಎಚ್ಚರಿಸಿದ್ದಾರೆ.

Dr Vishnuvardhan Memorial: cm basavaraj bommai to inaugurate Vishnuvardhan memorial

ಸ್ಮಾರಕ ಉದ್ಘಾಟನೆ ದಿನದಂದು ಮೈಸೂರು ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಬೆಂಗಳೂರಿನಿಂದ ಸ್ಮಾರಕದವರೆಗೆ 700 ವಾಹನಗಳ ಅದ್ಧೂರಿ ಮೆರವಣಿಗೆ ಇರುವುದರಿಂದ ಅಭಿಮಾನಿಗಳಿಗೆ ಅನುಕೂಲ ಮಾಡಿಕೊಡಲು ಅಗತ್ಯವಿರುವ ಕಡೆ ಸಂಚಾರ ದಟ್ಟಣೆ ಕಡಿಮೆ ಮಾಡಲು ಆದೇಶ ನೀಡಬೇಕು' ಎಂದು ವಿಷ್ಣು ಅಭಿಮಾನಿಗಳ ಪರವಾಗಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಮೈಸೂರಿನ ಎಚ್.ಡಿ. ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ಭಾನುವಾರ ಅಭಿಮಾನಿಗಳ ಸಾಹಸಸಿಂಹ, ದಾದಾ ಸ್ಮಾರಕ ಲೋಕಾರ್ಪಣೆಗೊಳ್ಳಲಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಅಭಿಮಾನ್ ಸ್ಟೂಡಿಯೋದಲ್ಲಿ ವಿಷ್ಣು ಸಮಾಧಿಗೆ ನಮನ ಸಲ್ಲಿಸಿ, ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ.

English summary
Dr Vishnuvardhan Memorial: Chief minister Basavaraj Bommai to inaugurate Actor Vishnuvardhan memorial in Mysuru's haalaalu village. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X