Mysuru: ದಸರಾ ಹಬ್ಬ ತಯಾರಿಯಲ್ಲಿ ಮೈಸೂರು: ಭಾರಿ ಸ್ಫೋಟಕಗಳನ್ನ ಪತ್ತೆ ಮಾಡಿದ ಪೊಲೀಸರು
ಮೈಸೂರು ಆಗಸ್ಟ್ 23: ಮೈಸೂರಿನಲ್ಲಿ ದಸರಾ ತಯಾರಿ ಜೋರಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳು ಅರಣ್ಯ ಪ್ರದೇಶದಿಂದ ಅರಮನೆ ನಗರಿಯತ್ತ ಹೆಜ್ಜೆ ಹಾಕಿವೆ. ಈ ನಡುವೆ ಹೋಟೆಲ್‌ವೊಂದರಲ್ಲಿ ಸ್ಪೋಟಕಗಳು ಪತ್ತೆಯಾಗಿವೆ. ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್‌ವೊಂದರಲ್ಲಿ ಭಾರಿ ಸ್ಫೋಟಕಗಳು ಪತ್ತೆಯಾಗಿವೆ.
ಮೈಸೂರಿನಲ್ಲಿ ದಸರಾ ತಯಾರಿ ನಡೆಯುತ್ತಿರುವಾಗ ಟಿ ನರಸೀಪರ ತಾಲೂಕಿನಲ್ಲಿ ಬಾಂಬ್ ಪತ್ತೆ ಆಗಿದ್ದು ಆತಂಕವನ್ನು ಹೆಚ್ಚಿಸಿದೆ. ನೀಲಿ ಬಣ್ಣದ ಬ್ಯಾಗ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಬಾಂಬ್‌ಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಅವು ನಾಡ ಬಾಂಬ್ ಎನ್ನುವುದು ಖಚಿತವಾಗಿದೆ. ಸದ್ಯ ಅವುಗಳನ್ನು ವಶಕ್ಕೆ ಪಡೆದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಇವುಗಳನ್ನು ಗಣಿಗಾರಿಕೆ ಹಾಗೂ ಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಲು ಬಳಸುತ್ತಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕಗಳನ್ನು ವಶಕ್ಕೆ ಪಡೆದು ಹೋಟೆಲ್ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ. ಅಪರಿಚಿತರು ಪ್ಲಾಸ್ಟಿಕ್ ಕವರ್fನಲ್ಲಿ ಒಂಬತ್ತು ಸ್ಪೋಟಕಗಳನ್ನು ಇಟ್ಟು ಹೋಗಿದ್ದಾರೆ. ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಆ ಕವರ್ ಅನ್ನು ಹೊರಗಡೆ ತಂದು ಮರಕ್ಕೆ ನೃತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ದಸರಾ ತಯಾರಿ..
ಮೈಸೂರು ದಸರಾಕ್ಕೆ ಆಗಮಿಸುವ ಅಭಿಮನ್ಯು ನೇತೃತ್ವದ ಗಜ ಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತವನ್ನು ನೀಡಲಾಗಿದೆ. ಪ್ರತಿ ವರ್ಷ ಗಜಪಯಣದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಕಿ ಆನೆಗಳು ದಸರಾ ಉತ್ಸವದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ತರಬೇತಿಗಾಗಿ ಮೈಸೂರಿಗೆ ಹೋಗುತ್ತವೆ.
ಈ ವರ್ಷ ಮೊದಲ ಬ್ಯಾಚ್‌ನಲ್ಲಿ ಒಂಬತ್ತು ಆನೆಗಳು, ಅಭಿಮನ್ಯು, ಧನಂಜಯ, ಗೋಪಿ, ಭೀಮಾ, ರೋಹಿತ್, ಕಂಜನ್, ಹೊಸ ಆನೆ ಏಕಲವ್ಯ ಹಾಗೂ ಹೆಣ್ಣು ಆನೆಗಳಾದ ವರಲಕ್ಷ್ಮಿ ಮತ್ತು ಲಕ್ಷ್ಮಿಯನ್ನು ಇಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅರಣ್ಯ ಇಲಾಖೆ ಹಾಗೂ ದಸರಾ ಸಮಿತಿಯಿಂದ ಬರ ಮಾಡಿಕೊಳ್ಳಲಾಯಿತು.
ಗಜಪಯಣ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯಲಿದ್ದು, ಜನಸಾಮಾನ್ಯರ ದಸರಾ ಆಗಲಿದೆ. ಅಲ್ಲದೆ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಚೆನ್ನಾಗಿ ಮಾಡಲು ಪ್ರಾಯೋಜಕರು ಯೋಜನೆ ಮಾಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications