ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

1450 ಎಕರೆ ಭೂ ವ್ಯಾಜ್ಯ: ಮೈಸೂರು ರಾಜವಂಶಸ್ಥರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಗೆಲುವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 27: ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲು ಬಳಿಯ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂಮಿ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಮೂರು ಸರ್ವೇ ನಂಬರ್​ಗಳಿಗೆ ಸೇರಿದ ಭೂಮಿ ಮೈಸೂರು ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣದ ವಿಚಾರ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉದಯ್ ಲಲಿತ್ ಹಾಗೂ ಅಜಯ್ ರಸ್ತೋಗಿ, "ಅರ್ಜಿಯು ವಿಚಾರಣೆಗೆ ಯೋಗ್ಯವಲ್ಲ,'' ಎಂದು ಮೇಲ್ಮನವಿಯನ್ನು ತಿರಸ್ಕರಿಸಿದ್ದಾರೆ.

Mysuru Dynasty Wins 1450 Acres Land Dispute Case In Supreme Court

ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ. ಮೈಸೂರು ಮಹಾರಾಜರ ಖಾಸಗಿ ಆಸ್ತಿ ಎಂದೇ ಇದೀಗ ತೀರ್ಮಾನಿಸಲಾಗಿದೆ.

3 ಸರ್ವೇ ನಂಬರ್‌ಗಳಿಂದ 1450 ಎಕರೆಯಷ್ಟು ಭೂಮಿ ಇದ್ದು, ಈಗ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜರಿಗೆ ಖಾಸಗಿ ಆಸ್ತಿ ಇದಾಗಿದೆ ಎಂದು ಹೇಳಲಾಗಿದೆ.

English summary
The Supreme Court rejected the appeal filed by former Mysuru District Collector Rohini Sindhuri and the state government over 1450 acres land disputes near the Chamundi Hills. Mysuru dynasty won the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X