ಚಾಮುಂಡಿ ಬೆಟ್ಟದಲ್ಲಿ ಇ - ಹುಂಡಿ ವ್ಯವಸ್ಥೆ ಜಾರಿ, ಸ್ಕ್ಯಾನ್ ಮಾಡಿ ಕಾಣಿಕೆ ನೀಡಿ
ಮೈಸೂರು, ಆಗಸ್ಟ್ 25: ಇದು ಡಿಜಿಟಲ್ ಜಮಾನ. ನಾಗರಿಕರು ಎಲ್ಲಿ ಹೋದರೂ ಡಿಜಿಟಲ್ ಪೇಮೆಂಟ್ ಮಾಡಲು ಬಯಸುತ್ತಾರೆ. ಸದ್ಯ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಭಕ್ತರಿಗೆ ಅನುಕೂಲವಾಗಲೆಂದು ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತರಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.
ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್. ಮಂಜುನಾಥಸ್ವಾಮಿ ಗುರುವಾರ ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ - ಹುಂಡಿ ಬಿಡುಗಡೆ ಮಾಡಿದರು. ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ವ್ಯವಸ್ಥೆ ಮಾಡಲಾಗಿದೆ.
ನಂತರ ಮಾತನಾಡಿದ ಡಾ. ಬಿ.ಎಸ್. ಮಂಜುನಾಥಸ್ವಾಮಿ, ಜಗತ್ತು ಡಿಜಿಟಲೀಕರಣದತ್ತ ದಾಪುಗಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಕೂಲವಾಗಲೆಂದು ಇ-ಪೇಮೆಂಟ ವ್ಯವಸ್ಥೆ ಜಾರಿಗೆ ತರಲಾಗಿದೆ.

ಇದರ ಭದ್ರತಾ ಕ್ರಮಗಳ ಬಗ್ಗೆ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ಷ್ಮ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ. ಭಕ್ತರು ಕಾಣಿಕೆ ಸಲ್ಲಿಕೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚಾಮುಂಡಿಬೆಟ್ಟ, ಮೈಸೂರು ಈ ಪೂರ್ಣ ಹೆಸರನ್ನು ಗಮನಿಸುವಂತೆ ವಿನಂತಿಸುತ್ತೇವೆ. ಅಲ್ಲದೆ ಇದರ ದುರುಪಯೋಗದ ಬಗ್ಗೆ ತಿಳಿದು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಇನ್ನು ಈ ಹುಂಡಿಯ ಜೊತೆಗೆ ಸಾಂಪ್ರದಾಯಿಕ ಹುಂಡಿಯೂ ದೇವಾಲಯದೊಳಗೆ ಇರುತ್ತದೆ ಎಂದು ಅವರು ತಿಳಿಸಿದರು.
ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ .ಜಿ. ಕೃಷ್ಣ ಅವರು ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ರಾಜ್ಯದ ಬಹುತೇಕ ಎ - ಗ್ರೇಡ್ ದೇವಸ್ಥಾನಗಳಲ್ಲಿ ಕ್ಯೂಆರ್ ಕೋಡ್ ಸಹಿತ ಇ - ಹುಂಡಿ ಸೌಲಭ್ಯವಿದ್ದು ಅದನ್ನು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ಆಳಸಿಕೊಳ್ಳುವಂತೆ ಇಲಾಖೆಯಿಂದ ಸೂಚಿಸಿದ್ದು, ಅದರಂತೆ ಇಂದು ಬಿಡುಗಡೆಗೊಳಿಸಲಾಗಿದೆ. ದೇವಿಯ ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಈ ದಸರಾ ಸಂದರ್ಭದಲ್ಲಿ ಆಚರಿಸುತ್ತಿರುವ ರೀಟೇಲ್ ಉತ್ಸವದ ತಾತ್ಕಾಲಿಕ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಚಾಮುಂಡಿಬೆಟ್ಟ ಶಾಖೆಯ ಮುಂಭಾಗದಲ್ಲಿ ನೆರವೇರಿಸಿದರು.

ನಿಮಿಷಾಂಬ ದೇವಾಲಯದಲ್ಲೂ ಇ-ಹುಂಡಿ
ರಾಜ್ಯದ ಪ್ರಸಿದ್ಧ ಶಕ್ತಿದೇವತಾ ಕೇಂದ್ರಗಳಲ್ಲಿ ಒಂದಾದ ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯದಲ್ಲಿ ಭಕ್ತರ ಕಾಣಿಕೆಯ ಹುಂಡಿಯ ಜೊತೆಗೆ ಇ-ಕಾಣಿಕೆ ಯೋಜನೆಯನ್ನು ಜಾರಿಗೆ ತರಲಾಗಿದೆ. ದೇವಾಲಯಕ್ಕೆ ಆಗಮಿಸುವ ಭಕ್ತ ಗೂಗಲ್ ಪೇ, ಫೋನ್ ಪೇ ಅಥವಾ ಪೇಟಿಎಂ ಮೂಲಕ ಕಾಣಿಕೆ ಪಾವತಿ ಮಾಡಬಹುದಾಗಿದೆ. ಇದಕ್ಕಾಗಿ ದೇವಾಲಯದಲ್ಲಿ 2 ಬೃಹತ್ ಕ್ಯೂ ಆರ್ ಕೋಡರ್ ಫಲಕ ಅಳವಡಿಸಲಾಗಿದೆ.
ಶ್ರೀನಿಮಿಷಾಂಬ ದೇವಾಲಯಕ್ಕೆ ಮಂಗಳವಾರ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ಮತ್ತು ರಜೆ ದಿನಗಳಲ್ಲಿ ಸಾಕಷ್ಟು ಭಕ್ತರು ಭೇಟಿ ನೀಡುತ್ತಾರೆ. ಅಮಾವಾಸ್ಯೆ ಮತ್ತು ಹುಣ್ಣಿಮೆ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಹೆಚ್ಚಿನ ಹುಂಡಿ ಹಣ ಸಂಗ್ರಹವಾಗುತ್ತದೆ. ಈ ದೇವಾಲಯದಲ್ಲಿ 19 ಹುಂಡಿಗಳಿದ್ದು, ಪ್ರತಿ 3 ತಿಂಗಳಿಗೊಮ್ಮೆ ದೇವಾಲಯದ ಆಡಳಿತ ಮಂಡಳಿ, ಶ್ರೀರಂಗಪಟ್ಟಣದ ಎಸ್‌ಬಿಐ ಶಾಖೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಹುಂಡಿ ತೆರೆದು, ಸ್ತ್ರೀಶಕ್ತಿ ಸ್ವಸಹಾಯ ಸಂಘದ ನೂರಾರು ಸದಸ್ಯರೊಂದಿಗೆ 1 ದಿನ, ವಿಡಿಯೋ ಚಿತ್ರೀಕರಣದ ಕಣ್ಗಾವಲಿನೊಂದಿಗೆ ಹುಂಡಿ ಎಣಿಕೆ ಕಾರ್ಯ ನಡೆಸುತ್ತಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications