ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ

ಮೈಸೂರು, ಡಿಸೆಂಬರ್ 24: ಹಲವು ಮೊದಲುಗಳಿಗೆ ಹೆಸರಾಗಿರುವ ಸಾಂಸ್ಕೃತಿಕ ನಗರಿ ಮೈಸೂರು ಇದೀಗ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ಮಾಡಿ ಕೊಡುವ ಮೂಲಕ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ.

ಮೈಸೂರು ನಗರದ ಸರಸ್ವತಿಪುರಂನಲ್ಲಿರುವ ತೃತೀಯ ಲಿಂಗಿಗಳ ಕಚೇರಿ ಆವರಣದಲ್ಲಿ ಕೇಂದ್ರ ಕಾರ್ಮಿಕ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಟ್ವಿನ್ಸ್ ಸಿ.ಎಸ್.ಸಿ ಡಿಜಿಟಲ್ ಸೇವಾ ಕೇಂದ್ರದ ವತಿಯಿಂದ ಮೊಟ್ಟ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ನೋಂದಣಿ ಕಾರ್ಯ ನಡೆಸಿತು.

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಇಂತಹದೊಂದು ಇ-ಶರ್ಮ್ ಕಾರ್ಡ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ತೃತೀಯ ಲಿಂಗಿಗಳ ಸಂಘದ ಮುಖ್ಯಸ್ಥರಾದ ಪ್ರಣತಿ ಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ನೋಂದಣಿ ಅಭಿಯಾನದಲ್ಲಿ 50ಕ್ಕೂ ಹೆಚ್ಚು ಮಂದಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ನೋಂದಣಿ ಮಾಡಿಕೊಂಡರು.

E-Shram Card Distribution To Transgender in Mysuru For the First Time in The Country

ಏನಿದು ಇ-ಶ್ರಮ್ ಕಾರ್ಡ್?
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಇ- ಶ್ರಮಿಕ ಕಾರ್ಡ್ ಅನ್ನು ಅಸಂಘಟಿತ ಕಾರ್ಮಿಕ ಅಭಿವೃದ್ಧಿ ಕಲ್ಯಾಣ ಯೋಜನೆಯಡಿ ಜಾರಿಗೊಳಿಸಲಾಗುತ್ತಿದೆ. ಯಾರೊಬ್ಬರ ಮಧ್ಯಸ್ಥಿಕೆ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕೆಂಬ ಮೋದಿ ಅವರ ಧ್ಯೇಯಕ್ಕೆ ಪೂರಕವಾಗಿ ದೇಶಾದ್ಯಂತ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ವ್ಯಾಪ್ತಿಯಲ್ಲಿ ಒಗ್ಗೂಡಿಸುವ ಕೆಲಸ ನಡೆಯುತ್ತಿದೆ. ಇದರ ಅಂಗವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಿಸಲಾಗಿದೆ.

ಯಾರೆಲ್ಲಾ ನೋಂದಣಿ ಆಗಬಹುದು?
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಇ-ಶ್ರಮ್ ಕಾರ್ಡ್ ಯೋಜನೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ, ಕೃಷಿ ಮೀನುಗಾರರು, ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಖಾಸಗಿ ವಾಹನ ಚಾಲಕರು, ಟೈಲರ್‌ಗಳು, ವ್ಯಾಪಾರಿಗಳು ಇ-ಶ್ರಮ್ ಕಾರ್ಡ್ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದು.

E-Shram Card Distribution To Transgender in Mysuru For the First Time in The Country

ಅಲ್ಲದೆ ಕೇಂದ್ರ ಸರ್ಕಾರ ಗುರುತಿಸಿರುವ ಬೀದಿ ಬದಿಯ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಇತರೆ ಕಾರ್ಮಿಕರು ವರ್ಗಗಳಡಿ ನೋಂದಣಿಯಾಗಬಹುದಾಗಿದೆ. ಈ ಶ್ರಮ ಕಾರ್ಡ್ ಮಾಡಿಸಲು ಫೋನ್ ನಂಬರ್‌, ಆಧಾರ್ ನಂಬರ್, ಬ್ಯಾಂಕ್ ಅಕೌಂಟ್ ನಂಬರ್‌ ಇದ್ದರೆ, ಸ್ಥಳದಲ್ಲೇ ಇ-ಶ್ರಮ್ ಕಾರ್ಡ್ ನಿಮ್ಮ ಕೈ ಸೇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+