ಉಪಚುನಾವಣೆ: ಎರಡು ನಾಮಪತ್ರ ತಿರಸ್ಕೃತ

ನಂಜನಗೂಡು ಉಪಚುನಾವಣೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ.

ಮೈಸೂರು, ಮಾರ್ಚ್ 22 : ಏಪ್ರಿಲ್ 9 ಭಾನುವಾರದಂದು ನಡೆಯಲಿರುವ ನಂಜನಗೂಡು ಉಪಚುನಾವಣೆಗೆ ಸ್ಪರ್ಧಿಸಲು ಉಮೇದುವಾರಿಕೆ ಸಲ್ಲಿಸಿದ್ದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆದಿದ್ದು, ದಾಖಲೆಗಳು ನಿಖರವಾಗಿಲ್ಲದ ಕಾರಣ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಜೆ. ಜಗದೀಶ್ ತಿಳಿಸಿದ್ದಾರೆ.

ಕಾಂಗ್ರೆಸ್ ನಿಂದ ಕಳಲೆ ಕೇಶವಮೂರ್ತಿ, ಬಿಜೆಪಿಯಿಂದ ವಿ.ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಚುನಾವಣಾ ಕಣಕ್ಕೆ ಒಟ್ಟು 14 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಈ ಪೈಕಿ 12 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಾ ಆರ್, ಹಾಗೂ ಶಿವಪ್ಪ ಅವರ ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಮಾ.24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.[ನಂಜನಗೂಡು ಉಪಚುನಾವಣೆ: ದಾಖಲಾಯ್ತು 14 ನಾಮಪತ್ರ]

EC rejects 2 nominations in by election

ಕಾಂಗ್ರೆಸ್ ಪಕ್ಷದಲ್ಲಿದ್ದ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 13 ಗುರುವಾರದಂದು ಫಲಿತಾಂಶ ಹೊರಬೀಳಲಿದೆ.[ನಂಜನಗೂಡು: 3.17 ಕೋಟಿ ಒಡೆಯ ವಿ. ಶ್ರೀನಿವಾಸ್ ಪ್ರಸಾದ್]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+