ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಗರಿಗೆದರಿದ ರಾಜಕೀಯ ಚಟುವಟಿಕೆ

ರಾಜ್ಯ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ. ಆಕಾಂಕ್ಷಿಗಳಲ್ಲಿ ಉತ್ಸಾಹ, ಹುಮ್ಮಸ್ಸು ಹೆಚ್ಚಾಗಿದೆ.

ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 16 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜೂನ್ 3 ರಂದು ಕ್ಷೇತ್ರ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಆಕಾಂಕ್ಷಿ ಅಭ್ಯರ್ಥಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿನ ಶಿಕ್ಷಕ ಮತದಾರರ ಸೆಳೆಯಲು ನಿರತರಾಗಿದ್ದಾರೆ.

Election Buzz Begins in South Teachers Constituency of State Legislative Council

ಜೆಡಿಎಸ್ ಪಕ್ಷದಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ಸ್‌ನ ಮಾಜಿ ಅಧ್ಯಕ್ಷ ಕೆ.ವಿವೇಕಾನಂದ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸೇರಿದಂತೆ ಕೆಲ ಮಂದಿ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಲಾಬಿ ನಡೆಸುತ್ತಿದ್ದಾರೆ.

ಕಳೆದ ಬಾರಿ ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಅವರು ಈ ಬಾರಿ ಮತ್ತೆ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್‌ನಿಂದ ಅಧಿಕೃತವಾಗಿ ಘೋಷಣೆಯಾಗಿದ್ದಾರೆ. ಇವರು ಅವಧಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಲೋಕಸಭೆ ಚುನಾವಣೆಯಂತೆ ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೂ ನನ್ನ ಗೆಲುವಿಗೆ ಯಾವುದೇ ತೊಂದರೆ ಆಗುವುದಿಲ್ಲಘಿ. ಅಥವಾ ಎರಡು ಪಕ್ಷದವರೂ ಪ್ರತ್ಯೇಕವಾಗಿ ಸ್ಪರ್ಧಿಸಿದರೂ ನನಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಮರಿತಿಬ್ಬೇಗೌಡ ತಿಳಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಆಕಾಂಕ್ಷಿಗಳ ದಂಡೇ ಇದೆ. ಮೈವಿವಿ ಸಿಂಡೇಕೇಟ್ ಮಾಜಿ ಸದಸ್ಯ ಡಾ. ಈ.ಸಿ.ನಿಂಗರಾಜ್‌ಗೌಡ ಅವರು ತಮಗೆ ಅವಕಾಶ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಕಂಡಿದ್ದ ಬಿ.ನಿರಂಜನಮೂರ್ತಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+