ಮೈಮುಲ್ ಚುನಾವಣೆ ಸೋಲು: ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಸಿ ಬಲರಾಂ ಆತ್ಮಹತ್ಯೆ

ಮೈಸೂರು, ಮಾರ್ಚ್ 20: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಸಿ ಬಲರಾಂ ಅವರು ಮೈಮುಲ್ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೇ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಕೆ.ಸಿ ಬಲರಾಂ ಅವರು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಮೈಮುಲ್ ಮಾಜಿ ನಿರ್ದೇಶಕರಾದ್ದರು.

ವಿಷ ಸೇವಿಸಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಬೇಸರಗೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎನ್ನಲಾಗಿದೆ.

Election Defeat: Mymul Former Director KC Balaram Committs Suicide

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲೂ ಅವರ ಬೆಂಬಲಿಗ ಅಭ್ಯರ್ಥಿಗಳು ಹಾಗೂ ಇವರ ಪುತ್ರ ಕೂಡ ಪರಾಭವಗೊಂಡಿದ್ದರು. ಜೊತೆಗೆ ಮೈಮುಲ್ ಚುನಾವಣೆಯಲ್ಲೂ ಸೋಲನ್ನು ಕಂಡ ಇವರು ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+