ಮಾಳವಿಕಾ ಅವಿನಾಶ್ ಗೆ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ
Recommended Video

ಮೈಸೂರು, ಮಾರ್ಚ್ 20: 'ನಾನು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದಷ್ಟೇ ಹೇಳಬಲ್ಲೆ. ನನ್ನ ಸ್ಪರ್ಧೆಯ ಬಗ್ಗೆ ಪಕ್ಷದ ಹಿರಿಯರು ಏನು ಹೇಳುತ್ತಾರೆ ಹಾಗೆ ನಾನು ಕೇಳುತ್ತೇನೆ' ಎಂದು ನಟಿ ಕಮ್ ರಾಜಕಾರಣಿ ಮಾಳವಿಕಾ ಅವಿನಾಶ್ ಅವರು ಹೇಳಿದ್ದಾರೆ.
ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿತ್ರ ನಟಿ ಮಾಳವಿಕಾ ಅವಿನಾಶ್, ಸ್ಥಳೀಯ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿಗಳ ಬಗ್ಗೆ ಚರ್ಚಿಸಲು ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲು ಆಗಮಿಸಿದ್ದೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ಹಿರಿಯ ನಾಯಕರು ನಿರ್ಧರಿಸುತ್ತಾರೆ.

ನಾನು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದಷ್ಟೇ ಹೇಳಬಲ್ಲೆ. ನನ್ನ ಸ್ಪರ್ಧೆಯ ಬಗ್ಗೆ ಪಕ್ಷದ ಹಿರಿಯರು ಏನು ಹೇಳುತ್ತಾರೆ ಹಾಗೆ ನಾನು ಕೇಳುತ್ತೇನೆ ಎಂದರು.
ಯಾವ ಕ್ಷೇತ್ರಕ್ಕೂ ಟಿಕೆಟ್ ಸಿಗದಿದ್ದರೆ ಏನು ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಮಾಳವಿಕಾ, ಎಲ್ಲದರ ಬಗ್ಗೆ ರಾಜ್ಯದ ನಾಯಕರು ಸರಿಯಾದ ಸಮಯದಲ್ಲಿ ಒಳ್ಳೆಯ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.












Click it and Unblock the Notifications