ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಸಿದ್ಧವಾಗಲಿದೆ ಆನೆ ಶಿಬಿರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 1: ಕೊಡಗು ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿಯ ಹಿನ್ನೀರಿನ ಸಮೀಪವಿರುವ ಮೀಸಲು ಜಾಗದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಆನೆ ಕ್ಯಾಂಪ್ ಮಾಡುವ ಪ್ರಸ್ತಾವನೆಯನ್ನು ಈಗಾಗಲೇ ಜಿಲ್ಲಾ ಅರಣ್ಯ ಇಲಾಖೆ ಸಿದ್ಧಪಡಿಸಿದೆ.

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಸೇರಿದಂತೆ ಪರಿಸರದ ಬಗ್ಗೆ ನುರಿತ ತಜ್ಞರ ತಂಡ ಕಳೆದ ತಿಂಗಳು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ದುಬಾರೆ ಆನೆ ಕ್ಯಾಂಪ್ ನ್ನು ವೀಕ್ಷಣೆ ಮಾಡಿದ್ದರು. ಆ ಸಂದರ್ಭದಲ್ಲಿ ದುಬಾರೆ ಆನೆ ಶಿಬಿರದಲ್ಲಿ 30 ಆನೆಗಳು ಇರುವ ಮಾಹಿತಿ ಪಡೆದ ತಂಡ, ಒಂದು ಆನೆ ಶಿಬಿರದಲ್ಲಿ 15 ಕ್ಕೂ ಹೆಚ್ಚು ಆನೆಗಳು ಇರಬಾರದು ಎಂದು ಜಿಲ್ಲಾ ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದರು.

ದೇವರ ದರ್ಶನ ಸಮಯ ಬದಲಾಯಿಸಿದ ಕೊಡಗಿನ ಪ್ರಸಿದ್ಧ ದೇಗುಲಗಳುದೇವರ ದರ್ಶನ ಸಮಯ ಬದಲಾಯಿಸಿದ ಕೊಡಗಿನ ಪ್ರಸಿದ್ಧ ದೇಗುಲಗಳು

ಅದರಂತೆ ಮೈಸೂರು ಮತ್ತು ಕೊಡಗು ಮುಖ್ಯ ಅರಣ್ಯ ಸಂರಕ್ಷಣಾ ಹೀರಲಾಲ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರಭಾಕರನ್ ಮತ್ತು ಸೋಮವಾರಪೇಟೆ ತಾಲೂಕು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನೆಹರು ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಹಾರಂಗಿಯ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ಪರಿಶೀಲನೆ ಮಾಡಿದ್ದರು.

Elephant Camp Start In The Backwaters Of Harangi Reservoir

ಇಲ್ಲಿ ಆನೆ ಶಿಬಿರವನ್ನು ಪ್ರಾರಂಭ ಮಾಡಲು ಬೇಕಾಗುವ ಎಲ್ಲಾ ಸೌಕರ್ಯಗಳು ಇರುವುದನ್ನು ಮತ್ತು ಪ್ರಮುಖವಾಗಿ ನೀರಿನ ಸೌಲಭ್ಯದ ವ್ಯವಸ್ಥೆಗೆ ಹಿನ್ನೀರಿನ ಪ್ರದೇಶದ ಸಮೀಪದಲ್ಲಿ ದೊಡ್ಡ ನೀರಿನ ಕೆರೆ ಇದ್ದು, ಇದರಿಂದ ಆನೆಗಳಿಗೆ ನೀರಿನ ಸೌಲಭ್ಯಕ್ಕೆ ಅನುಕೂಲವಾಗಲಿದೆ ಎಂಬ ಉದ್ದೇಶದಿಂದ ಅರಣ್ಯ ಇಲಾಖೆಯ ವತಿಯಿಂದ ಹಾರಂಗಿಯ ಹಿನ್ನೀರಿನ ಪ್ರದೇಶ ಆನೆ ಶಿಬಿರ ಪ್ರಾರಂಭಿಸಲು ಸೂಕ್ತವಾದ ಸ್ಥಳವಾಗಿದೆ ಎಂದು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

ಕೊಡಗಿನಲ್ಲಿ ಮುಂಗಾರು ಚುರುಕು; ಹಾರಂಗಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಜಂಟಿ ತಾಲೀಮುಕೊಡಗಿನಲ್ಲಿ ಮುಂಗಾರು ಚುರುಕು; ಹಾರಂಗಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಜಂಟಿ ತಾಲೀಮು

ಹಾರಂಗಿ ಅಣೆಕಟ್ಟೆ ಸಂಗೀತ ಕಾರಂಜಿಯ ಸಮೀಪದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಟ್ರೀ ಪಾರ್ಕ್ ಮಾಡುವ ಯೋಜನೆಯು ಈಗಾಗಲೇ ಕಾರ್ಯಗತವಾಗಿದೆ. ಟ್ರೀ ಪಾರ್ಕ್ ಸಮೀಪದ ಜಾಗದಲ್ಲಿ ಆನೆ ಕ್ಯಾಂಪ್ ಮಾಡಲು ಸ್ಥಳ ಪರಿಶೀಲನೆ ನಡೆದಿದ್ದು, ಇದು ಜಿಲ್ಲೆಯಲ್ಲಿ ಎರಡನೇಯ ಆನೆ ಕ್ಯಾಂಪ್ ಆಗಲಿದೆ.

Elephant Camp Start In The Backwaters Of Harangi Reservoir

ಈಗಾಗಲೇ ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾಗಿರುವ ಹಾರಂಗಿ ಅಣೆಕಟ್ಟೆಯು ಹೆಚ್ಚು ಅಭಿವೃದ್ಧಿ ಹೊಂದಿ ಅಣೆಕಟ್ಟೆಯ ಮುಂಭಾಗದಲ್ಲಿ ಹತ್ತು ಎಕರೆ ಪ್ರದೇಶದಲ್ಲಿ ಸುಂದರವಾದ ಪಾರ್ಕ್ ವ್ಯವಸ್ಥೆ ಇದೆ. ಇದರ ಜೊತೆಯಲ್ಲಿ ಸಂಜೆ ಸಮಯದಲ್ಲಿ ಪ್ರವಾಸಿಗರಿಗೆ ಮನರಂಜನೆ ನೀಡಲು ಆಧುನಿಕ ತಂತ್ರಜ್ಞಾನ ಬಳಸಿ ಸುಂದರ ಸಂಗೀತ ಕಾರಂಜಿ ವ್ಯವಸ್ಥೆ ಇದೆ.

ಈಗಾಗಲೇ ಹಾರಂಗಿ ಅಣೆಕಟ್ಟೆಯ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದ ಟ್ರೀ ಪಾರ್ಕ್ ಮತ್ತು ಆನೆ ಕ್ಯಾಂಪ್ ಪ್ರಾರಂಭಗೊಂಡಲ್ಲಿ ಹಾರಂಗಿ ಜಲಾಶಯ ಜಿಲ್ಲೆಯ ಮತ್ತೊಂದು ಪ್ರಮುಖ ಪ್ರವಾಸಿ ತಾಣ ಆಗಲಿದೆ.

English summary
The Forest Department has already prepared a proposal for an elephant camp in the reserve near Harangi Backwaters, a major dam in Kodagu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X