ಮೈಸೂರಲ್ಲಿ ಭಾನುವಾರ ಪೊಲೀಸ್ ನೇಮಕಾತಿ ಪರೀಕ್ಷೆ

ಮೈಸೂರು, ಜ. 17: ನಗರದ ಏಳು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಯ ನೇಮಕಾತಿ ಸಂಬಂಧ ಲಿಖಿತ ಮರು ಪರೀಕ್ಷೆಗಳು ನಡೆಯಲಿವೆ. ಈ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಂ.ಎ. ಸಲೀಂ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತ 2oo ಮೀಟರ್ ವ್ಯಾಪ್ತಿ ಪ್ರದೇಶವನ್ನು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಿಷೇಧಿತ ಎಂದು ಘೋಷಿಸಲಾಗಿದೆ. ಈ ಸಮಯದಲ್ಲಿ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗೆ ಮಾತ್ರ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸುವಂತಿಲ್ಲ ಎಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

police

ಪರೀಕ್ಷೆ ನಡೆಯಲಿರುವ ಏಳು ಕೇಂದ್ರಗಳು...
1) ಮಹಾರಾಜ ಪದವಿ ಪೂರ್ವ ಕಾಲೇಜು, ಜೆ.ಎಲ್.ಬಿ ರಸ್ತೆ, ಮೈಸೂರು
2) ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಜೆ.ಎಲ್.ಬಿ. ರಸ್ತೆ, ಮೈಸೂರು
3) ಮಹಾಜನ ಪದವಿ ಕಾಲೇಜು, ಜಯಲಕ್ಷ್ಮೀಪುರಂ, ಮೈಸೂರು
4) ಮಹಾಜನ ಪಿ.ಯು. ಕಾಲೇಜು, ಜಯಲಕ್ಷ್ಮೀಪುರಂ, ಮೈಸೂರು
5) ಗೀತಾ ಶಿಶು ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ನಗರ, ಮೈಸೂರು
6) ಟೇರಿಷಿಯನ್ ಪದವಿ ಕಾಲೇಜು, ಸಿದ್ಧಾರ್ಥ ನಗರ, ಮೈಸೂರು
೭) ಟೇರಿಷಿಯನ್ ಪದವಿ ಪೂರ್ವ ಕಾಲೇಜು, ಸಿದ್ಧಾರ್ಥ ನಗರ, ಮೈಸೂರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+