• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರಿಗೆ ನಿರ್ಬಂಧ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 6: ಈ ಬಾರಿ ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿಗೆ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಪ್ರವೇಶವನ್ನು ನಿಷೇಧಿಸಿದ್ದು, ಸಾಂಪ್ರದಾಯಿಕವಾಗಿ ಮಾತ್ರ ಹಬ್ಬ ಆಚರಣೆ ಮಾಡಲಾಗುವುದು ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಈ ಬಾರಿ ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಿರುವುದಾಗಿ ತಿಳಿದುಬಂದಿದೆ. ಅರಮನೆಯ ದರ್ಬಾರ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ನಿಷೇಧ ಹೇರಿದ್ದು, ಖಾಸಗಿ ದರ್ಬಾರ್ ವೀಕ್ಷಣೆ ಹಾಗೂ ನೇರ ಪ್ರಸಾರಕ್ಕೂ ಅವಕಾಶ ಇಲ್ಲ.

ಅರ್ಥಪೂರ್ಣವಾದ ಸರಳ ದಸರಾ ಆಚರಣೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಅರಮನೆಯಲ್ಲಿ ಹತ್ತು ದಿನಗಳು ನಡೆಯಲಿರುವ ಶರನ್ನವರಾತ್ರಿಯಲ್ಲಿ ಪೂಜಾ ಕಾರ್ಯಗಳು ಸಾಂಪ್ರದಾಯಿಕವಾಗಿ ನಡೆಯಲಿವೆ. ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು ಎಂದು ಪ್ರಮೋದಾದೇವಿ ಒಡೆಯರ್ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

English summary
Entry Restricted to Public and Media for Yaduveer Wadeyar's Private Darbar At mysuru Palace this time due to coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X