ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 21: ಬಕ್ರೀದ್ ಹಿನ್ನೆಲೆ ಇಂದು(ಜು.21) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಬಕ್ರೀದ್ ಪ್ರಯುಕ್ತ ಇಂದು ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ರಜೆ ದಿನ ಹಾಗೂ ಆಷಾಢ ಮಾಸದ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಹೆಚ್ಚು ಜನ ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ. ಈಗಾಗಲೇ ಜಿಲ್ಲಾಡಳಿತ ಆಷಾಢ ಮಾಸದ ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಪ್ರವೇಶ ನಿರ್ಬಂಧಿಸಿದೆ.

Mysuru: Entry To Chamundi Hill Temple Restricted On 21 July Wednesday

ಶುಕ್ರವಾರ, ಶನಿವಾರ, ಭಾನುವಾರದ ವಾರಾಂತ್ಯ ಹಾಗೂ ರಜಾ ದಿನಗಳಂದು ಪ್ರವೇಶ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದ ಎಲ್ಲ ಗೇಟ್‌ಗಳೂ ಕ್ಲೋಸ್ ಆಗಿವೆ. ಸಚಿವರು, ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.

Mysuru: Entry To Chamundi Hill Temple Restricted On 21 July Wednesday

ಈ ವೇಳೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ, ಪುನಸ್ಕಾರ, ರುದ್ರಾಭಿಷೇಕ, ಕುಂಕುಮಾಭಿಷೇಕ ಮಾಡಿ ವಿಶೇಷ ಅಲಂಕಾರ ಮಾಡಲಾಗುತ್ತದೆ. ಪ್ರತಿ ವರ್ಷವೂ ಆಷಾಢ ಶುಕ್ರವಾರಗಳಂದು ಸಹಸ್ರಾರು ಜನ ಸೇರುತ್ತಿದ್ದರು. ಆದರೆ ಕೊರೊನಾ ಹರಡುವಿಕೆ ತಡೆಗಟ್ಟಲು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Recommended Video

ರಾಹುಲ್ ದ್ರಾವಿಡ್ ಹಾಗು ಮಿಕ್ಕಿ ಆರ್ಥರ್ಗೆ ಇರುವ ವೆತ್ಯಾಸ ಇದೆ | Oneindia Kannada

English summary
Public entry restricted to the Chamundi Hill Temple on Wednesday (July 21) due to Bakrid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X