ಅಧಿಕಾರದತ್ತ ಕಾಂಗ್ರೆಸ್.. ಆದ್ರೆ ಸಿದ್ದರಾಮಯ್ಯ ಮನೆಯಲ್ಲಿ ಸೂತಕ
ಮೈಸೂರು: ರಾಜ್ಯ ವಿಧಾನಸಭೆ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ವಿಪಕ್ಷ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗುತ್ತಿದೆ. ಈಗಾಗಲೇ ಮ್ಯಾಜಿಕ್ ನಂಬರ್ ದಾಟಿದೆ. ಪಕ್ಷದ ಕಾರ್ಯಕರ್ತರೆಲ್ಲ ಸಂಭ್ರಮಿಸುತ್ತಿದ್ದಾರೆ. ಆದರೆ, ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ಸಿದ್ದರಾಮಯ್ಯ ಅವರ ಭಾವ ಇಹಲೋಕ ತ್ಯಜಿಸಿದ್ದಾರೆ. ಸಹೋದರಿ ಶಿವಮ್ಮ ಪತಿ ರಾಮೇಗೌಡ (69) ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಮೃತರು, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದು, ಇಂದು ಸಂಜೆ ಸಿದ್ದರಾಮನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮನೆಯಲ್ಲಿ ಸಾವಾಗಿರುವುದು ಅವರ, ಬೆಂಬಲಿಗರಿಗೆ ಬೇಸರ ತರಿಸಿದೆ. ಇನ್ನು, ಪುತ್ರನ ವರುಣ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿದ್ದರಾಮಯ್ಯ, ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ಘೋಷಣೆವೊಂದೇ ಬಾಕಿ ಇದೆ.












Click it and Unblock the Notifications