• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆಶಿಗೆ ಸಮನ್ಸ್ ನೀಡಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ: ಸಿದ್ದರಾಮಯ್ಯ

|
   ಡಿಕೆಶಿ ಪ್ರಕರಣದ ಬಗ್ಗೆ ಕೊನೆಗೂ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ | Siddaramaiah | Oneindia Kannada

   ಮೈಸೂರು, ಆಗಸ್ಟ್ 30: "ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಸಮನ್ಸ್ ನೀಡಿ ಕೆಲವರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.

   DK Shivakumar ED Investigation LIVE Updates: ಡಿ.ಕೆ.ಶಿವಕುಮಾರ್‌ಗೆ ಇಡಿ ಸಂಕಷ್ಟ: ಸುದ್ದಿಗೋಷ್ಠಿ ಆರಂಭ

   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಕೆಶಿ ಕಾನೂನು ಹೋರಾಟ ಮಾಡುತ್ತಿದ್ದಾರೆ. ಅವರ ಕೇಸ್ ಹೈಕೋರ್ಟ್ ನಲ್ಲಿ ವಜಾ ಆಗಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಗೆ ತೆರಳಲಿದ್ದಾರೆ. ನ್ಯಾಚುರಲ್ ಜಸ್ಟೀಸ್ ಇರಬೇಕು. ನಮ್ಮ ನಡುವೆ ಅದು ಕಾಣೆಯಾಗುತ್ತಿದೆ" ಎಂದು ಕಿಡಿಕಾರಿದ್ದಾರೆ.

   ಪ್ರವಾಹಕ್ಕೆ ಪರಿಹಾರ ಬಿಡುಗಡೆಯಾಗದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, "ಈ ಕುರಿತು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಸಾಂಕೇತಿಕವಾಗಿ ನಿನ್ನೆ ಧರಣಿ ಮಾಡಿದ್ದೇವೆ. ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಹಣ ಬಂದಿಲ್ಲ. ಪ್ರವಾಹ ಪರಿಹಾರ ಕೆಲಸವಾಗಿಲ್ಲ. ಅವರು ರಾಜಕೀಯದಲ್ಲಿ ಮುಳುಗಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಪ್ರತಿಭಟನೆ ಮಾಡಿದ್ದೇವೆ. ಮುಂದಿನ ದಿನದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತೇವೆ" ಎಂದು ಎಚ್ಚರಿಕೆ ನೀಡಿದರು.

   ಇದೇ ವೇಳೆ ಮಾಜಿ ಶಾಸಕ ವಾಸು ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ವಾಸು ಅವರ ಆರೋಗ್ಯ ವಿಚಾರಿಸಿದರು. ವಾಸು ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

   English summary
   Former Cm Siddaramaiah Reacts on Ed Hearing of Dk Shivakumar. He said that, Govt Agencies Should Not Be Misused on this case.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X