ಕೊರೊನಾ ವೈರಸ್ ಭಯ: SSLC ಪರೀಕ್ಷೆ ಮುಂದೂಡಿ
ಮೈಸೂರು, ಮೇ 24: ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ನ ಭಯ ಇರುವುದರಿಂದ SSLC ಪರೀಕ್ಷೆ ಮುಂದೂಡಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
ಪದವಿ ಪರೀಕ್ಷೆ ಮತ್ತು SSLC ಮುಂದೂಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು, ಕೊರೊನಾ ವೈರಸ್ ನಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಆತಂಕ ಮೂಡಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ವಿಚಾರವಾಗಿ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದಲ್ಲಿ ವಲಸೆ ಕಾರ್ಮಿಕರನ್ನು ಕರೆಸುವ ಹಾಗೂ ಕಳುಹಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದ್ದರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಎಂದರು.

ಕೊರೊನಾ ವೈರಸ್ ಹೆಚ್ಚಳ ವಿಚಾರದಲ್ಲಿ ಸರ್ಕಾರ ಮತ್ತಷ್ಟು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರಲ್ಲದೇ, ಕೇಂದ್ರ ಸರ್ಕಾರವು 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ನ್ನು ರಾಜ್ಯವಾರು ಹಂಚಿಕೆ ಮಾಡಬೇಕೆಂದರು.
ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಮಾಡಬಾರದು, ಎಲ್ಲ ರಾಜ್ಯವನ್ನು ಗಣನೆಗೆ ತೆಗೆದುಕೊಂಡು ಕೊರೊನಾ ವಿರುದ್ಧ ಹೋರಾಟ ಮಾಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಸಲಹೆ ನೀಡಿದರು.











Click it and Unblock the Notifications