ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಖಾತ್ರಿ ಪಡಿಸಿದ ಪುತ್ರ ಪೂರ್ವಜ್
ಮೈಸೂರು, ಜೂನ್ 28 : ಈಗಾಗಲೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಎಚ್.ವಿಶ್ವನಾಥ್ ಜುಲೈ 4 ರಂದು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಸ್ವತಃ ಅವರ ಪುತ್ರ ಪೂರ್ವಜ್ ವಿಶ್ವನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಹೆಚ್.ವಿಶ್ವನಾಥ್, ಜುಲೈ 2 ರಂದು ಯಾವ ಪಕ್ಷ ಸೇರಲಿದ್ದೇನೆ ಎಂಬ ಬಗ್ಗೆ ತಿಳಿಸುತ್ತೇನೆ ಎಂದು ನಿನ್ನೆ ಪತ್ರಕರ್ತರ ಸಂವಾದದಲ್ಲಿ ಹೇಳಿದರು. ಇದರ ಬೆನ್ನಲ್ಲೇ ಅವರ ಮಗ ಪೂರ್ವಜ್ ವಿಶ್ವನಾಥ್ ಫೇಸ್ಬುಕ್ನಲ್ಲಿ, ನಮ್ಮ ತಂದೆ ಜುಲೈ 4ರಂದು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯಲು ಬೆಂಗಳೂರಿನ ಜೆಡಿಎಸ್ ಕಚೇರಿ ಜೆ.ಪಿ ಭವನಕ್ಕೆ ತೆರಳಿಲಿದ್ದಾರೆ. ಅಂದು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸ್ನೇಹಿತರು ಬಂದು ಅವರ ಕೈ ಬಲ ಪಡಿಸಬೇಕೆಂದು ಫೇಸ್ಬುಕ್ನಲ್ಲಿ ಮನವಿ ಮಾಡಿದ್ದಾರೆ.

ಇದೇ ಜೂನ್ 23 ರಂದು 40 ವರ್ಷದ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ವಲ್ಲದ ಮನಸ್ಸಿನಿಂದಲೇ ರಾಜೀನಾಮೆ ನೀಡಿದ ವಿಶ್ವನಾಥ್ ಒಂದು ವಾರ ಕಾಲ ಅಭಿಮಾನಿಗಳು, ಹಿತೈಷಿಗಳ ಜೊತೆ ಚರ್ಚೆ ಮಾಡಿದ್ದರು. ಅಂತಿಮವಾಗಿ ನೆಲ, ಜಲ, ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಹಾಗೂ ನಮ್ಮ ಜೊತೆ ಇರುವ ಮುಸ್ಲಿಂ ಗೆಳೆಯರಿಗೆ ಅನ್ಯಾಯವಾಗಬಾರದು ಎಂಬ ಹಿತದೃಷ್ಟಿಯಿಂದ ಜುಲೈ 4 ರಂದು ಜೆಡಿಎಸ್ ಪಕ್ಷಕ್ಕೆ ವಿಶ್ವನಾಥ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಅವರ ಮಗ ಪೂರ್ವಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.

-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications