ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಹೈ ಅಲರ್ಟ್ : ಚಾಮುಂಡಿ ಬೆಟ್ಟಕ್ಕೆ ರಾತ್ರಿ ನೋ ಎಂಟ್ರಿ

|
Google Oneindia Kannada News

ಮೈಸೂರು, ಆಗಸ್ಟ್ 19: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ರಾತ್ರಿ 8ರ ನಂತರ 4 ದ್ವಾರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಮುಖ್ಯದ್ವಾರವನ್ನು ರಾತ್ರಿ 11ಕ್ಕೆ ಮುಚ್ಚಲಾಗುತ್ತದೆ. ಪೊಲೀಸ್ ಬಿಗಿಬಂದೋಬಸ್ತ್ ಗೆ ಸೂಚಿಸಲಾಗಿದೆ.

ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಫೋನ್ ಕರೆ; ತನಿಖೆ ಚುರುಕುಗೊಳಿಸಿದ ಎನ್ ಐಎಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಫೋನ್ ಕರೆ; ತನಿಖೆ ಚುರುಕುಗೊಳಿಸಿದ ಎನ್ ಐಎ

ಅಲ್ಲದೇ ನಗರದ ಎಲ್ಲ ಲಾಡ್ಜ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಅಲ್ಲಿ ತಂಗಿರುವವರ ವಿವರ ಕಲೆ ಹಾಕಲಾಗುತ್ತಿದೆ. ರೈಲು ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಲೋಹ ಶೋಧಕ ಯಂತ್ರಗಳನ್ನು ಅಳವಡಿಸಬೇಕು, ಪ್ರತಿ ಪ್ರಯಾಣಿಕರ ಮೇಲೆ ನಿಗಾ ಇಡಬೇಕು ಎಂದು ಪೊಲೀಸರಿಗೆ ಸೂಚಿಸಿದ್ದಾರೆ.

Extensive security alert in Mysuru district

ನಗರದಲ್ಲಿ 10 ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ವಿಶೇಷ ನಿಗಾ ಇಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ರಾತ್ರಿ ಪ್ರವೇಶ ನಿರ್ಬಂಧವು ದಸರಾ ಮುಗಿಯುವವರೆಗೂ ಮುಂದುವರೆಯಲಿದೆ.

Extensive security alert in Mysuru district

ಮೈಸೂರು ಅರಮನೆ, ಚಾಮರಾಜೇಂದ್ರ ಮೃಗಾಲಯ, ಕೇಂದ್ರ ಸರ್ಕಾರದ ಸಂಸ್ಥೆಗಳು, ಮಾಲ್‌, ಸೆಂಟ್ ಫಿಲೋಮಿನಾ ಚರ್ಚ್, ಡಿಎಫ್ಆರ್ ಎಲ್, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

English summary
Extensive security alert in Mysuru district. No entry for Chamundi hills Night after 11 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X