ಮೈಸೂರು ದಸರಾ; ಈ ಬಾರಿ ಜಟ್ಟಿಗಳ ವಜ್ರಮುಷ್ಟಿ ಕಾಳಗವೂ ರದ್ದು

ಮೈಸೂರು, ಅಕ್ಟೋಬರ್ 12: ಕೊರೊನಾ ವೈರಸ್ ಕಾರಣದಿಂದಾಗಿ ಈ ಬಾರಿ ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ. ದಸರಾ ಕಾರ್ಯಕ್ರಮಗಳನ್ನು ಅರಮನೆಗೆ ಸೀಮಿತಗೊಳಿಸಲಾಗುತ್ತಿದೆ. ಅರಮನೆಯೊಳಗಿನ ಸಾಂಪ್ರದಾಯಿಕ ವಿಧಿ ವಿಧಾನಗಳನ್ನೂ ತೀರಾ ಸರಳಗೊಳಿಸಲಾಗುತ್ತಿದೆ.

ಆದರೆ ನೂರಾರು ವರ್ಷಗಳ ಇತಿಹಾಸವಿರುವ, ದಸರಾ ವೈಶಿಷ್ಟ್ಯಗಳಲ್ಲಿ ಒಂದಾಗಿದ್ದ ವಜ್ರಮುಷ್ಟಿ ಕಾಳಗವನ್ನೂ ಈ ಬಾರಿ ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ. ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ ನಡೆಯುವ, ಜಟ್ಟಿಗಳ ವಜ್ರಮುಷ್ಟಿ ಕಾಳಗವನ್ನು ನಡೆಸದಿರಲು ತೀರ್ಮಾನಿಸಲಾಗಿದೆ.

ವಿಜಯದಶಮಿ ದಿನ ಅರಮನೆಯ ಅಂಗಳದಲ್ಲಿ ಜರುಗುವ ವಜ್ರ ಮುಷ್ಠಿ ಕಾಳಗ ಇತಿಹಾಸ ಪ್ರಸಿದ್ಧಿ. ಈ ವಜ್ರಮುಷ್ಟಿ ಕಾಳಗದಲ್ಲಿ ಮೈಸೂರು, ಚಾಮರಾಜನಗರ, ಚನ್ನಪಟ್ಟಣ ಹಾಗೂ ಬೆಂಗಳೂರಿನಿಂದ ನಾಲ್ವರು ಜಟ್ಟಿಗಳು ಭಾಗಹಿಸುತ್ತಿದ್ದರು. ಈ ಬಾರಿಯೂ ಕಾಳಗಕ್ಕೆ ಜಟ್ಟಿಗಳು ಸಜ್ಜಾಗುತ್ತಿದ್ದರು. ಆದರೆ ಅರಮನೆಯೊಳಗಿನ ಸಾಂಪ್ರದಾಯಿಕ ವಿಧಿ ವಿಧಾನಗಳನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀರ ಸರಳಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಬಾರಿ ಜಟ್ಟಿ ಕಾಳಗವನ್ನು ನಡೆಸುವುದಿಲ್ಲವೆಂದು ಅರಮನೆಯಿಂದ ಸಂದೇಶ ರವಾನೆಯಾಗಿದೆ.

Mysuru Dasara: Famous Vajra Mushti Kalaga Cancelled Due To Coronavirus

ಇದುವರೆಗೂ ಒಂದು ವರ್ಷವೂ ಜಟ್ಟಿ ಕಾಳಗ ನಿಂತಿಲ್ಲ. ಆದರೆ ಈ ಬಾರಿ ಕೊರೊನಾ ಸೋಂಕು ವಜ್ರಮುಷ್ಟಿ ಕಾಳಗದ ಮೇಲೂ ಪರಿಣಾಮ ಬೀರಿದೆ. ಇದೀಗ, ಜಟ್ಟಿ ಕಾಳಗವನ್ನು ಸಾಂಪ್ರದಾಯಿಕ ರೀತಿಯಲ್ಲೇ ನಡೆಸುವಂತೆ ಜಟ್ಟಿಗಳು ಆಗ್ರಹಿಸಿದ್ದಾರೆ. ಈ ಕುರಿತು ತಮ್ಮ ‌ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜಮಾತೆಗೆ ಜಟ್ಟಿ ಗಳು ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು: ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು 42,064 ಇದ್ದು, ಇದುವರೆಗೂ 33,629 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,549 ಇದ್ದು, ಇದುವರೆಗೆ 886 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+