ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಸಜ್ಜಾದ ಮೈಸೂರು ರೈತರು: ಕಾರಣ ಇಲ್ಲಿದೆ?

ಮೈಸೂರು, ಡಿಸೆಂಬರ್‌ 14: ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಹೋರಾಟ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ಇದೆ ಡಿಸೆಂಬರ್‌ 16ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ವಿವಿಧ ಬೇಡಿಕೆಗಳಾದ ಪ್ರಸಕ್ತ ಸಾಲಿನ ಕಬ್ಬಿಗೆ 5,500 ನಿಗದಿ ಮಾಡಬೇಕು. ಕಳೆದ ಸಾಲಿನ 950 ಕೋಟಿ ಹಣ ರೈತರಿಗೆ ತಕ್ಷಣ ಕೊಡಬೇಕು. ರಾಜ್ಯದ ರೈತರ ಸಾಲವನ್ನು ಸಂಪೂರ್ಣ ಮನ್ನ ಮಾಡಬೇಕು. ಬಗರುಕುಂ ಸಾಗುವಳಿದಾರರ ಸಾಗುವಳಿ ಚೀಟಿಯನ್ನು ತಕ್ಷಣ ನೀಡಬೇಕು. ಇಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ಮಾಡಬೇಕು.

Farmers Plan Protest At Belagavi Suvarna Soudha On December 16

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಎಂಎಸ್ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಬೇಕು. ಕೃಷಿ ವಿದ್ಯುತ್ ಖಾಸಗಿಕರಣ ಮಾಡುವುದನ್ನು ತಕ್ಷಣ ಕೈ ಬಿಟ್ಟು ಅಕ್ರಮ ಸಕ್ರಮ ಯೋಜನೆ ಮರು ಜಾರಿ ಮಾಡಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರನ್ನು ಪರಿಗಣಿಸಬಾರದು. ಆರ್‌ಟಿಸಿಗಳಲ್ಲಿ ವಕ್ಫ್ ಮಂಡಳಿಯ ಹೆಸರು ಬಂದಿರುವುದನ್ನು ತಿದ್ದುಪಡಿ ಮಾಡಲು ಆದೇಶವನ್ನು ಗೆಜೆಟ್ ನೋಟಿಫಿಕೇಶನ್ ಅಲ್ಲಿ ಪ್ರಕಟಿಸಬೇಕು. ಕಾಡು ಪ್ರಾಣಿಗಳ ಅವಳಿಯಿಂದ ನಷ್ಟ ಹೊಂದಿರುವ ರೈತರಿಗೆ ವೈಜ್ಞಾನಿಕವಾಗಿ ಬೆಳೆ ನಷ್ಟವನ್ನು ನೀಡಬೇಕು.

ಅತಿವೃಷ್ಟಿ ಅನಾವೃಷ್ಟಿಯಿಂದ ನೊಂದಿರುವ ರೈತರಿಗೆ ವೈಜ್ಞಾನಿಕವಾಗಿ ಬೆಳೆ ನಷ್ಟ ನೀಡಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ನಬಾರ್ಡ್‌ನ ಕೃಷಿ ಸಾಲಕ್ಕೆ ಕೊಡುವ ಯೋಜನೆಗಳನ್ನು ಕಡಿತಗೊಳಿಸಿರುವುದನ್ನು ಪುನರ್ ಪರಿಶೀಲನೆ ಮಾಡಿಕೊಳ್ಳಬೇಕು. ಮೇಕೆದಾಟು ಯೋಜನೆಯನ್ನು ರಾಜ್ಯ ಸರ್ಕಾರ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಕೃಷಿ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿ ಮಾಡುವುದರಲ್ಲಿ ರೈತರನ್ನು ಜಾಯಿಂಟ್ ವೆಂಚರ್ ಎಂದು ಪರಿಗಣಿಸಿ ರೈತರ ಪಾಲುದಾರರಾಗಿ ಮುಂದುವರಿಸಬೇಕು.

ರಾಜ್ಯದಲ್ಲಿ ಬೆಳೆದಿರುವ ರೈತರ ಬತ್ತವನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು ಕೇಂದ್ರ ಸರ್ಕಾರದ ಎಂಎಸ್‌ಪಿ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 500 ರೂಪಾಯಿ ಹೆಚ್ಚುವರಿ ಪ್ರೋತ್ಸಾಹ ಧನ ನೀಡಬೇಕು. ಅರಣ್ಯದಂಚಿನಲ್ಲಿರುವ ರೈತರ ಕೃಷಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳುವುದನ್ನು ಕೈಬಿಡಬೇಕು ಎಂಸು ಆಗ್ರಹಿಸಿ 16ರಂದು ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ರೈತರು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಸಭೆಯಲ್ಲಿ ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+