ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಬ್ಬದ ವಿಶೇಷ ರೈಲುಗಳ ಅವಧಿ ವಿಸ್ತರಣೆ; ರೈಲುಗಳ ಪಟ್ಟಿ

|
Google Oneindia Kannada News

ಮೈಸೂರು, ನವೆಂಬರ್ 25: ದಸರಾ ಮತ್ತು ದೀಪಾವಳಿ ಹಬ್ಬದ ಅಂಗವಾಗಿ ಮೈಸೂರಿನಿಂದ ವಿವಿಧ ಸ್ಥಳಗಳಿಗೆ ಹಬ್ಬದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಲಾಗಿತ್ತು. ಈ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹಬ್ಬದ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಕೆಲವು ರೈಲುಗಳು ಡಿಸೆಂಬರ್ ತನಕ, ಮತ್ತೆ ಕೆಲವು ರೈಲುಗಳು 2021ರ ಜನವರಿ ತನಕ ಸಂಚಾರ ನಡೆಸಲಿವೆ ಎಂದು ಪ್ರಕಟಣೆ ಹೇಳಿದೆ.

ಕಲಬುರಗಿ-ಲಾತೂರ; ನೂತನ ರೈಲು ಮಾರ್ಗ ಸಮೀಕ್ಷೆಗೆ ಒಪ್ಪಿಗೆ ಕಲಬುರಗಿ-ಲಾತೂರ; ನೂತನ ರೈಲು ಮಾರ್ಗ ಸಮೀಕ್ಷೆಗೆ ಒಪ್ಪಿಗೆ

ಮೈಸೂರು ನಗರದಿಂದ ಸಂಚಾರ ನಡೆಸುವ ಒಟ್ಟು 8 ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ. ಇವುಗಳಲ್ಲಿ ಪ್ರತಿದಿನ ಸಂಚಾರ ನಡೆಸುವ, ವಾರಕ್ಕೆ ಎರಡು ಬಾರಿ ಸಂಚಾರ ನಡೆಸುವ ರೈಲುಗಳು ಸೇರಿವೆ.

ಇತಿಹಾಸ ನಿರ್ಮಾಣ ಮಾಡಲಿದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣ ಇತಿಹಾಸ ನಿರ್ಮಾಣ ಮಾಡಲಿದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣ

 Festival Special Express Train Service Extended

ಮೈಸೂರು-ವಾರಣಾಸಿ, ಮೈಸೂರು-ಅಜ್ಮೀರ್, ಅಜ್ಮೀರ್-ಮೈಸೂರು, ವಾರಣಾಸಿ-ಮೈಸೂರು ಸೇರಿದಂತೆ ವಿವಿಧ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಯಶವಂತಪುರ-ವಾಸ್ಕೋ ನಡುವೆ ಪ್ರತಿದಿನದ ವಿಶೇಷ ರೈಲು ಯಶವಂತಪುರ-ವಾಸ್ಕೋ ನಡುವೆ ಪ್ರತಿದಿನದ ವಿಶೇಷ ರೈಲು

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸಾಮಾನ್ಯ ರೈಲುಗಳು ಸಂಚಾರ ನಡೆಸುತ್ತಿಲ್ಲ. ಪ್ರಯಾಣಿಕರ ಬೇಡಿಕೆ ಇರುವ ಮಾರ್ಗದಲ್ಲಿ ಮಾತ್ರ ವಿಶೇಷ ರೈಲುಗಳನ್ನು ಭಾರತೀಯ ರೈಲ್ವೆ ಓಡಿಸುತ್ತಿದೆ. ದಸರಾ ಮತ್ತು ದೀಪಾವಳಿ ಹಬ್ಬದ ಅಂಗವಾಗಿ ದೇಶಾದ್ಯಂತ ಹಲವು ವಿಶೇಷ ರೈಲುಗಳನ್ನು ಓಡಿಸಲು ಆರಂಭಿಸಲಾಗಿತ್ತು.

ರೈಲುಗಳ ಪಟ್ಟಿ ಇಲ್ಲಿದೆ...

English summary
South western railway extended the festival special express train service from Mysuru. Here are the list of trains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X