ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

|
Google Oneindia Kannada News

ಮೈಸೂರು, ಜನವರಿ 17: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ, ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಪಟ್ಟಿಯಲ್ಲಿ ಒಟ್ಟು ಜಿಲ್ಲೆಯಲ್ಲಿ 24,65,102 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಂ. ಜಿ ಶಂಕರ್ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 12,34,454 ಪುರುಷ ಮತದಾರರು, 12,30, 648 ಮಹಿಳಾ ಮತದಾರರು ಅಂತಿಮ ಪಟ್ಟಿಯಲ್ಲಿದ್ದಾರೆ.

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿ ಅಂತಿಮಲೋಕಸಭಾ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿ ಅಂತಿಮ

ಕಳೆದ ವಿಧಾನಸಭಾ ಚುನಾವಣೆಯಲ್ಲಿ 2687 ಮತಗಟ್ಟೆಗಳಿತ್ತು. ಈ ಬಾರಿಯ 2921 ಮತಗಟ್ಟೆಗಳಿವೆ. ಒಟ್ಟಾರೆ 234 ಹೆಚ್ಚುವರಿ ಮತಗಟ್ಟೆಗಳು ಆಯ್ಕೆಯಾಗಿದೆ ಎಂದರು.

Final list of Mysuru voters has been published

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹ ಮತದಾರರು ಅಂತಿಮ ಮತದಾರರ ಪಟ್ಟಿ ಪರಿಶೀಲಿಸಿಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಕೋರಿದರು.

 ಮತದಾರರ ಪಟ್ಟಿಯಲ್ಲಿ 5 ಕೋಟಿ ಹೆಸರು: ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ 5 ಕೋಟಿ ಹೆಸರು: ಚುನಾವಣಾ ಆಯೋಗ

ಅರ್ಹ ನಾಗರಿಕರ ಹೆಸರು ಸೇರ್ಪಡೆಯಾಗದೇ ಇದ್ದಲ್ಲಿ ಈಗಲೂ ಸಹ ನಮೂನೆ 6ರಲ್ಲಿ ಅರ್ಜಿಯನ್ನು ನಿಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು. ಹಾಗೆಯೇ ಮೃತ, ಸ್ಥಳಾಂತರ, ಪುನರಾವರ್ತನೆ ಆಗಿರುವ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೆ ತೆಗೆಯಲು ನಮೂನೆ 7ರಲ್ಲಿ ಅರ್ಜಿಯನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ ಹಾಗೂ ತಾಲೂಕು ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ವಿವರಿಸಿದರು.

 ಜನವರಿ 25ರ ಬಳಿಕ ಹೊಸ ಮಾತದಾರರ ಕೈಸೇರಲಿದೆ ಗುರುತಿನ ಚೀಟಿ ಜನವರಿ 25ರ ಬಳಿಕ ಹೊಸ ಮಾತದಾರರ ಕೈಸೇರಲಿದೆ ಗುರುತಿನ ಚೀಟಿ

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಮೈಸೂರು ಜಿಲ್ಲೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮತದಾರ ಸೌಲಭ್ಯ ಕೇಂದ್ರ ಸ್ಥಾಪನೆಯಾಗಲಿದೆ. ಬೆಳಗ್ಗೆ 9 ರಿಂದ ರಾತ್ರಿ 9ರವರೆಗೆ ಮತದಾರ ಸೌಲಭ್ಯ ಕೇಂದ್ರ ಕಾರ್ಯನಿರ್ವಹಿಸಲಿದೆ.

ರಾಜಕೀಯ ಪಕ್ಷಗಳಿಗೆ ಜಿಲ್ಲೆಯ ಪ್ರತಿ ಮತಗಟ್ಟೆಗಳಿಗೂ ಬೂತ್ ಮಟ್ಟದ ಏಜೆಂಟರುಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

English summary
According to the Election Commission's direction, the list of voters has been published. On thus final list being 24,65,102 voters in the Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X