ಜಂಬೂ ಸವಾರಿ ಅಂತಿಮ ತಾಲೀಮು; ಮೆರವಣಿಗೆಯಲ್ಲಿ 6 ಆನೆ ಭಾಗಿ
ಮೈಸೂರು, ಅಕ್ಟೋಬರ್ 13; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ಕಳೆಕಟ್ಟಿದ್ದು, ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿ ಮೆರವಣಿಗೆ ಹಿನ್ನಲೆಯಲ್ಲಿ ಬುಧವಾರ ಅರಮನೆ ಅಂಗಳದಲ್ಲಿ ಅಂತಿಮ ಹಂತದ ಜಂಬೂಸವಾರಿ ತಾಲೀಮು ನಡೆಸಲಾಯಿತು.
ಅಕ್ಟೋಬರ್ 15ರಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಯಾವುದೇ ಅಡೆತಡೆಗಳು ಎದುರಾಗದಂತೆ ಮುನ್ನೆಚ್ಚರಿಕೆವಹಿಸುವ ಹಾಗೂ ಜಂಬೂಸವಾರಿ ಮೆರವಣಿಗೆಯ ಸಮಯ ಪಾಲನೆ ಮಾಡುವ ಉದ್ದೇಶದೊಂದಿಗೆ ತಾಲೀಮು ನಡೆಸಲಾಯಿತು.
ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ತಾಲೀಮಿನಲ್ಲಿ ಗಜಪಡೆ ಸಾರಥಿ ಅಭಿಮನ್ಯುಗೆ ಮರದ ಅಂಬಾರಿ ಹೊರಿಸದೆ ತಾಲೀಮು ನಡೆಸಲಾಯಿತು. ಈ ವೇಳೆ ಅಭಿಮನ್ಯು ಜೊತೆ ಕುಮ್ಕಿ ಆನೆಗಳಾಗಿ ಕಾವೇರಿ, ಚೈತ್ರ ಆನೆಗಳು ಹೆಜ್ಜೆಹಾಕಿದವು.

ಈ ವೇಳೆ ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿದರೆ. ಡಿಸಿಪಿ ಗೀತಾ ಪ್ರಸನ್ನ, ಸಿಎಆರ್ ಡಿಸಿಪಿ ಶಿವರಾಮ್ ಹಾಗೂ ಇನ್ನಿತರ ಅಧಿಕಾರಿಗಳು ತಾಲೀಮಿನಲ್ಲಿ ಪಾಲ್ಗೊಂಡಿದ್ದರು. ತಾಲೀಮಿನಲ್ಲಿ ಗಜಪಡೆ ಜೊತೆ ಅಶ್ವದಳದ ಸಿಬ್ಬಂದಿ, ಪೊಲೀಸ್ ಇಲಾಖೆಯ ವಿವಿಧ ತುಕಡಿಗಳ ಸಿಬ್ಬಂದಿ ಆಕರ್ಷಕ ಪೊಲೀಸ್ ಪಥ ಸಂಚಲನ ನಡೆಸಿದರು.
ಬಿಗಿ ಪೊಲೀಸ್ ಬಂದೋಬಸ್ತ್; ವಿಜಯದಶಮಿ ದಿನ ಅರಮನೆ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ದಸರಾ ಜಂಬೂಸವಾರಿ ನಡೆಯುವ ಅಕ್ಟೋಬರ್ 15ರಂದು ಅನೇಕ ಜನರು ಅರಮನೆಯತ್ತ ಆಗಮಿಸುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆಯ ಸುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಸಂಬಂಧ ಅಕ್ಟೋಬರ್ 14ರಂದು ಪೋಲಿಸ್ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಿದ್ದು, ಸಾರ್ವಜನಿಕರು ಸಹಕರಿಸುವಂತೆ ನಗರ ಪೋಲಿಸ್ ಆಯುಕ್ತ ಡಾ. ಚಂದ್ರಗುಪ್ತ ಮನವಿ ಮಾಡಿದ್ದಾರೆ. ಅಲ್ಲದೇ, ಅರಮನೆಯ ಒಳಗೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಅರಮನೆ ಒಳಗಡೆ ಕೋವಿಡ್ ನಿಯಮದ ಅಡಿಯಲ್ಲಿ ಸೂಕ್ತ ಭದ್ರತೆಯೊಂದಿಗೆ ಮೆರವಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
"ಇವತ್ತಿನ ಅಂತಿಮ ಹಂತದ ರಿಹರ್ಸಲ್ ಯಶಸ್ವಿಯಾಗಿ ನಡೆದಿದ್ದು, ದಸರಾಗೆ ಬೇಕಾದ ಎಲ್ಲಾ ಸಿದ್ದತೆಗಳು ಮುಕ್ತಾಯವಾಗಿದೆ" ಎಂದು ಮೈಸೂರು ನಗರ ಪೋಲಿಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದ್ದಾರೆ.
ಮೆರವಣಿಗೆಯಲ್ಲಿ ಗೋಪಾಲಸ್ವಾಮಿ; ಈ ಬಾರಿಯ ದಸರಾ ಜಂಬೂಸವಾರಿ ಮೆರವಣಿಯಲ್ಲಿ ಗೋಪಾಲಸ್ವಾಮಿ ಆನೆ ಇರುತ್ತಾನೆ. ಶ್ರೀರಂಗಪಟ್ಟಣದಲ್ಲಿ ಪಟಾಕಿ ಮತ್ತು ಕಲರ್ ಪೇಪರ್ ಕಣ್ಣಿಗೆ ಬಿದ್ದಿದ್ದರಿಂದ ಆ ರೀತಿ ವರ್ತಿಸಿದ್ದಾನೆ. ಅಲ್ಲದೇ ಗೋಪಾಲಸ್ವಾಮಿ ಕಳೆದ 10 ವರ್ಷದಿಂದ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದು, ಅತ್ಯಂತ ಅನುಭವಿ ಆನೆಯಾಗಿದೆ. ಹೀಗಾಗಿ ಒಂದು ಘಟನೆ ಇಟ್ಟುಕೊಂಡು ಆನೆಯನ್ನು ದೂರಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
"ಜಂಬೂ ಸವಾರಿಯಲ್ಲಿ ಆರು ಆನೆಗಳು ಭಾಗವಹಿಸುತ್ತವೆ. ಮೊದಲ ಬಾರಿಗೆ ಬಂದಿರುವ ಅಶ್ವತ್ಥಾಮ ಭಾಗವಹಿಸುತ್ತಾನೆ. ನಗರ ಪ್ರದೇಶದ ವಾತಾವರಣಕ್ಕೆ ಹೊಸ ಆನೆಗಳು ಹೊಂದಿಕೊಂಡಿವೆ. ಗುರುವಾರ ಮಧ್ಯರಾತ್ರಿಯಿಂದಲೇ ಆನೆಗಳಿಗೆ ಅಲಂಕಾರ ಆರಂಭಿಸುತ್ತೇವೆ. ವಿಜಯದಶಮಿದಿನ ಮಧ್ಯಾಹ್ನ 2.30ಕ್ಕೆ ಅಂಬಾರಿ ಕಟ್ಟುವ ಕಾರ್ಯ ಶುರುವಾಗಲಿದೆ" ಎಂದು ಡಿಸಿಎಫ್ ಕರಿಕಾಳನ್ ಮಾಹಿತಿ ನೀಡಿದರು.
ನವರಾತ್ರಿ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ಅರಮನೆಯಲ್ಲಿ ಆಯುಧ ಪೂಜೆ ನಡೆಯಲಿದ್ದು, ಅಂದು ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭವಾಗಲಿದೆ. 7.45ಕ್ಕೆ ರಾಜಮನೆತನದ ಆಯುಧಗಳನ್ನು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನಿಸಿ ಪೂಜೆ ಸಲ್ಲಿಸಿದ ಬಳಿಕ ಎಲ್ಲಾ ಆಯುಧಗಳನ್ನ ಅರಮನೆ ಕಲ್ಯಾಣಮಂಟಪಕ್ಕೆ ತಂದು ಇರಿಸಲಾಗುತ್ತದೆ. ನಂತರ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜೆ ಸಲ್ಲಿಸಲಿದ್ದಾರೆ.
ವಿಜಯದಶಮಿ ಆಚರಣೆ; ನವರಾತ್ರಿಯ ಕೊನೆದಿನದಂದು ನಡೆಯುವ ವಿಜಯದಶಮಿ ಹಿನ್ನಲೆಯಲ್ಲಿ ಅಕ್ಟೋಬರ್ 15ರಂದು ಅರಮನೆಯಲ್ಲಿ ವಿಜಯದಶಮಿ ಆಚರಣೆ ನಡೆಸಲಾಗುತ್ತದೆ. ಅಂದು ಮುಂಜಾನೆ 5.45ಕ್ಕೆ ಅರಮನೆಯ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸುಗಳಿಗೆ ಪೂಜೆ ನೆರವೇರಿಸಲಾಗುತ್ತದೆ. ಇದಾದ ಬಳಿಕ ಬೆಳಗ್ಗೆ 7.20 ರಿಂದ 7.40ರವರೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದ್ದು, ಈ ವೇಳೆ ಯದುವೀರ್ ಒಡೆಯರ್ ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ಮೂಲಕ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ.
ಈ ಬಾರಿ ಕೊರೊನಾ ಕಾರಣದಿಂದಾಗಿ ದಸರಾ ವಿಜಯದಶಮಿ ದಿನದಂದು ಅರಮನೆಯಲ್ಲಿ ನಡೆಯುತ್ತಿದ್ದ ವಜ್ರಮುಷ್ಠಿ ಕಾಳಗ ನಡೆಸುವುದನ್ನ ಕೈಬಿಡಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications