ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿಲ್ಲಾ ಪಂಚಾಯ್ತಿ: ಕೈ–ತೆನೆ ಮೈತ್ರಿಗೆ ಗ್ರೀನ್ ಸಿಗ್ನಲ್

|
Google Oneindia Kannada News

ಮೈಸೂರು, ಫೆಬ್ರವರಿ 23 : ಕಳೆದ ಮೂರುವರೆ ವರ್ಷಗಳಿಂದ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿಯೊಂದಿಗೆ ಹೊಂದಿದ್ದ ಸಖ್ಯವನ್ನು ಜೆಡಿಎಸ್ ಇದೀಗ ಸಂಪೂರ್ಣ ಕಳೆದುಕೊಂಡಿದೆ.

ಈ ಮೈತ್ರಿಯನ್ನು ಕಡಿದುಕೊಂಡು ರಾಜ್ಯ ಮಟ್ಟದಲ್ಲಿ ಮಾಡಿಕೊಂಡಿರುವ ಮೈತ್ರಿಯನ್ನು ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಮುಂದುವರಿಸಬೇಕೆಂದು ಕೈ ನಾಯಕರು ಹಠ ತೊಟ್ಟಿದೆ ಮೂಲ ಕಾರಣ ಎನ್ನಲಾಗಿದೆ..

ಕಳೆದ ಮೂರುವರೆ ವರ್ಷಗಳಿಂದ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿಯೊಂದಿಗೆ ಹೊಂದಿದ್ದ ಸಖ್ಯವನ್ನು ಜೆಡಿಎಸ್ ಇದೀಗ ಸಂಪೂರ್ಣ ಕಳೆದುಕೊಂಡಿದೆ.

ಈ ಮೈತ್ರಿಯನ್ನು ಕಡಿದುಕೊಂಡು ರಾಜ್ಯ ಮಟ್ಟದಲ್ಲಿ ಮಾಡಿಕೊಂಡಿರುವ ಮೈತ್ರಿಯನ್ನು ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಮುಂದುವರಿಸಬೇಕೆಂದು ಕೈ ನಾಯಕರು ಹಠ ತೊಟ್ಟಿದ್ದೆ ಮೂಲ ಕಾರಣ ಎನ್ನಲಾಗಿದೆ..

ಮೈಸೂರು ಜಿ.ಪಂ.ನಲ್ಲಿ ಮೈತ್ರಿ ಕಗ್ಗಂಟು:ನಾಳೆ ಸಿಗಲಿದೆಯಾ ಉತ್ತರ? ಮೈಸೂರು ಜಿ.ಪಂ.ನಲ್ಲಿ ಮೈತ್ರಿ ಕಗ್ಗಂಟು:ನಾಳೆ ಸಿಗಲಿದೆಯಾ ಉತ್ತರ?

ಜಿಲ್ಲಾ ಪಂಚಾಯಿತಿಯಲ್ಲಿ ಮೂರು ವರ್ಷಗಳಿಂದ ಬಿಜೆಪಿ-ಜೆಡಿಎಸ್‌ ಆಡಳಿತ ನಡೆಸುತ್ತಾ ಬಂದಿದೆ. ಇನ್ನುಳಿದ ಎರಡು ವರ್ಷ ಜೆಡಿಎಸ್‌-ಕಾಂಗ್ರೆಸ್‌ ಅಧಿಕಾರ ನಡೆಸಲಿದೆ.

ಇದೀಗ ನಡೆದಿರುವ ಒಪ್ಪಂದದಂತೆ ಮುಂದಿನ ಒಂದು ವರ್ಷದ ಅವಧಿಗೆ ಜೆಡಿಎಸ್‌ಗೆ ಅಧ್ಯಕ್ಷ ಸ್ಥಾನ ಲಭಿಸಲಿದೆ. ಆದ್ದರಿಂದ ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಪರಿಮಳಾ ಶ್ಯಾಂ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ.

Finally JDS join hands with congress party on Mysuru zilla panchayath election

ಅಧ್ಯಕ್ಷ ಸ್ಥಾನ ಮೀಸಲು 'ಪ್ರವರ್ಗ ಎ' ಮಹಿಳೆಗೆ ಮೀಸಲಾಗಿದ್ದು, ಈ ಮೀಸಲಾತಿಯಡಿ ಜೆಡಿಎಸ್‌ನಲ್ಲಿ ಪರಿಮಳಾ ಮಾತ್ರ ಇದ್ದಾರೆ. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನು ಕಾಂಗ್ರೆಸ್‌ ಪಕ್ಷ ಶನಿವಾರ ಬೆಳಿಗ್ಗೆ ತೀರ್ಮಾನಿಸಲಿದೆ. ಸಚಿವರಾದ ಸಾ.ರಾ.ಮಹೇಶ್‌ ಮತ್ತು ಜಿ.ಟಿ.ದೇವೇಗೌಡ ಅವರು ಬಿಜೆಪಿ ಜತೆ ಮೈತ್ರಿ ಮುಂದುವರಿಯಲಿದೆ ಎಂದು ಹೇಳುತ್ತಲೇ ಬಂದಿದ್ದರು.

ಆದರೆ ಸಾ.ರಾ.ಮಹೇಶ್‌ ಅವರು ಶುಕ್ರವಾರ ತಡರಾತ್ರಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಜತೆಗಿನ ಮೈತ್ರಿ ಮುರಿದುಕೊಂಡಿರುವ ವಿಚಾರ ತಿಳಿಸಿದರು.

ಮೈಸೂರು ಜಿಪಂನಲ್ಲಿ ಅಧಿಕಾರಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಕಸರತ್ತು ಮೈಸೂರು ಜಿಪಂನಲ್ಲಿ ಅಧಿಕಾರಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಕಸರತ್ತು

ಬಿಜೆಪಿ ಜತೆ ಮೈತ್ರಿ ಮುಂದುವರಿಸಿಕೊಂಡು ಹೋಗಬೇಕು ಎಂಬುದು ನನ್ನ ಹಾಗೂ ಸ್ಥಳೀಯ ಮುಖಂಡರ ತೀರ್ಮಾನವಾಗಿತ್ತು. ಆದರೆ ಕಾಂಗ್ರೆಸ್‌ ಜತೆ ಕೈಜೋಡಿಸುವಂತೆ ಹೈಕಮಾಂಡ್‌ ನಿರ್ದೇಶನ ನೀಡಿದೆ ಎಂದು ಹೇಳಿದರು. ಹಿಂದೆ ಬಿಜೆಪಿ ಜತೆಗೆ ಒಪ್ಪಂದ ಮಾಡಿಕೊಂಡಾಗ ಪರಿಸ್ಥಿತಿ ಬೇರೇಯೇ ಇತ್ತು. ಅಭಿವೃದ್ಧಿಯ ದೃಷ್ಟಿಯಿಂದ ಕಾಂಗ್ರೆಸ್‌ ಜತೆ ಹೋಗಬೇಕು ಎಂದು ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಿದೆ. ವರಿಷ್ಠ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಜತೆ ಮಾತುಕತೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದು ಕೊಳ್ಳಲಾಗಿದೆ ಎಂದು ವಿವರಿಸಿದರು.

ಬಿಜೆಪಿಗೆ ದ್ರೋಹ ಬಗೆದಂತೆ ಆಗಿಲ್ಲವೇ ಎಂಬ ಪ್ರಶ್ನೆಗೆ, ಬಿಜೆಪಿ ಜತೆಗೆ ಆಡಳಿತ ನಡೆಸಿದ ಸಂದರ್ಭದಲ್ಲಿ ಅವರ ಸಂಖ್ಯೆಗೆ ಅನುಗುಣವಾಗಿ ಉಪಾಧ್ಯಕ್ಷ ಸ್ಥಾನ ಮತ್ತು ಇತರ ಸ್ಥಾನಮಾನಗಳನ್ನು ಕೊಟ್ಟಿದ್ದೇವೆ. ರಾಜಕೀಯದಲ್ಲಿ ಏನು ಬೇಕಾದರೂ ನಡೆಯುತ್ತದೆ ಎಂದು ಉತ್ತರಿಸಿದರು.

ಜೆಡಿಎಸ್‌-ಕಾಂಗ್ರೆಸ್‌ ನಡುವಿನ ಮೈತ್ರಿ ಒಪ್ಪಂದದಂತೆ ಮುಂದಿನ ಒಂದು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನ ಜೆಡಿಎಸ್‌ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ ಲಭಿಸಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಕಾಂಗ್ರೆಸ್‌ ಮುಖಂಡ ಎಚ್‌.ಪಿ.ಮಂಜುನಾಥ್‌ ತಿಳಿಸಿದರು. ಕೊನೆಯ ಒಂದು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೂ, ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ಗೂ ಸಿಗಲಿದೆ ಎಂದು ಹೇಳಿದರು.

ಮೈಸೂರು ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿ ಮೈಸೂರು ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿ

ರೆಸಾರ್ಟ್‌ನಲ್ಲಿ ವಾಸ್ತವ್ಯ: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಯಾಗುವ ಬಗ್ಗೆ ಶುಕ್ರವಾರ ಸಂಜೆಯವರೆಗೂ ಖಚಿತತೆ ಇರಲಿಲ್ಲ. ಇದರಿಂದ ತನ್ನ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಜೆಡಿಎಸ್‌ ರೆಸಾರ್ಟ್ ಮೊರೆ ಹೋಗಿತ್ತು.

ಶುಕ್ರವಾರ ಸಂಜೆ ಎಲ್ಲ ಸದಸ್ಯರು ಕುಶಾಲನಗರದ ರೆಸಾರ್ಟ್‌ಗೆ ತೆರಳಿ ಇಂದು ಬೆಳಿಗ್ಗೆ ಹಿಂದಿರುಗಿದರು. ಕೋಮುವಾದಿ ಶಕ್ತಿಯನ್ನು ದೂರವಿಡಬೇಕು ಎಂಬುದು ನಮ್ಮ ಉದ್ದೇಶ. ರಾಜ್ಯದಲ್ಲಿ ಕಾಂಗ್ರೆಸ್‌ ಇದೇ ಉದ್ದೇಶದಿಂದ ಜೆಡಿಎಸ್‌ಗೆ ಬೆಂಬಲ ನೀಡಿದೆ. ಜಿಲ್ಲಾ ಪಂಚಾಯಿತಿಯಲ್ಲೂ ಅದೇ ರೀತಿ ಮೈತ್ರಿ ಆಗಬೇಕು ಎಂದಿದ್ದರು.

ಪಕ್ಷಗಳ ಬಲಾಬಲ : 49 ಸದಸ್ಯ ಬಲದ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್‌ 22, ಜೆಡಿಎಸ್‌ 18 ಮತ್ತು ಬಿಜೆಪಿ 8 ಸ್ಥಾನಗಳನ್ನು ಹೊಂದಿವೆ. ಒಬ್ಬರು ಪಕ್ಷೇತರ ಸದಸ್ಯ ಇದ್ದಾರೆ.

English summary
After so many days of drama Congress join hands with JDS alliance in the Mysuru Zilla Panchayat. Know BJP leader’s thoughts become reverse in this situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X