ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು, ಡಿಸೆಂಬರ್‌ 27: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಸಂಸದ ಪ್ರತಾಪ ಸಿಂಹ ವಿರುದ್ಧ ನಗರದ ದೇವರಾಜ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯ‌ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಂಗಳವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ.

FIR registered against MP Pratap simha

ದೂರಿನಲ್ಲಿ ಏನಿದೆ?:

ನಾನು ಸೋಮಾರಿಸಿದ್ದನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಹೀಗಾಗಿ ನಾನೇ ಟಾರ್ಗೆಟ್ ಎಂದು ಪ್ರತಾಪ್ ಸಿಂಹ ಮೈಸೂರಿನ ಹುಣಸೂರಿನಲ್ಲಿ ನಡೆದ ಹನುಮ ಜಯಂತಿಯಲ್ಲಿ ಮಾತನಾಡಿದ್ದ ಅವರು, ನಾನು ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇನೆ. ಸೋಮಾರಿಸಿದ್ದನ ರೀತಿ ಸುಮ್ಮನೆ ಕುಳಿತು ಜಾತಿ ರಾಜಕಾರಣ ಮಾಡಿಲ್ಲ. ಹೀಗಾಗಿ ನಾನೇ ಟಾರ್ಗೆಟ್ ಎಂದು ಆರೋಪಿಸಿದರು.

ರಾಜ್ಯದಲ್ಲಿ 28 ಜನ ಸಂಸದರು ಇದ್ದಾರೆ. ಆದರೆ ಪ್ರತಾಪ್ ಸಿಂಹನ ಮಾತ್ರ ಟಾರ್ಗೆಟ್ ಮಾಡುತ್ತಾರೆ ಏಕೆ? ಸಿದ್ದರಾಮಯ್ಯ ಅವರು ಅಭದ್ರತೆಯಿಂದ ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಈ ರೀತಿ ದ್ವೇಷದ ರಾಜಕಾರಣ ಮಾಡಬೇಡಿ. ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ ಎಂದು ಹೇಳಿದರು.

ಕಾಂಗ್ರೆಸ್ ಗೆ ನನ್ನ ಮೇಲೆ ದ್ವೇಷ ಯಾಕೆ? ನಾನೆಂದು ನೀನು ಗೌಡ, ಕುರುಬು, ನೀನು ಲಿಂಗಾಯತ ಅಂತಾ ನಾನು ಅವರ ರೀತಿ ಜಾತಿ ರಾಜಕಾರಣ ಮಾಡಿಲ್ಲ. ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತ ಕೂಡಲೇ ಸಿದ್ದರಾಮಯ್ಯ ಕುರ್ಚಿ ಅಲ್ಲುಗಾಡುತ್ತದೆ. ಹೀಗಾಗಿ ನನ್ನ ಮೇಲೆ ಸತತ ಅಕ್ರಮಣ ಸಾಗಿದೆ ಸಿದ್ದರಾಮಯ್ಯ ಅವರು 40 ವರ್ಷದಲ್ಲಿ ಏನು ಮಾಡಿದ್ದಾರೆ ಹೇಳಲಿ. ಬಡವರ ಮಕ್ಕಳು ರಾಜಕಾರಣ ಮಾಡಬಾರದಾ? ಹಾಗಾಗಿ ನಿರಂತರವಾಗಿ ನನ್ನ ಮೇಲೆ ದಾಳಿ ನಡೆಯುತ್ತಿದೆ ಎಂದು ದೂರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+