Siddaramaiah: ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳಡಿ ಎಫ್‌ಐಆರ್

ಮೈಸೂರು ಸೆಪ್ಟೆಂಬರ್ 27: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರ ಖುರ್ಚಿಗೆ ಕುತ್ತು ತಂದಿದೆ. ಮುಡಾ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹಾಗಾದರೆ ಸಿದ್ದರಾಮಯ್ಯ ವಿರುದ್ಧ ದಾಖಲಾದ ಸೆಕ್ಷನ್‌ಗಳು ಯಾವವು? ಸಿದ್ದರಾಮಯ್ಯ ಅವರ ಜೊತೆಗೆ ಯಾರೆಲ್ಲಾ ಹೆಸರಿನ ಮೇಲೆ ದೂರು ದಾಖಲಾಗಿದೆ?

ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರನ್ನ ಮುಡಾ ಹಗರಣ ಪ್ರಕರಣ ಸಂಕಷ್ಟದಲ್ಲಿ ಸಿಲುಕಿಸಿದೆ. ಇಂದು ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ.

FIR under many sections against Siddaramaiah

ಎ1 ಆರೋಪಿ ಸಿದ್ದರಾಮಯ್ಯ ಎ2 ಆರೋಪಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ದೂರು ದಾಖಲಿಸಲಾಗಿದೆ. ಸಿದ್ದರಾಮಯ್ಯ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426,465, 468, 340, 351 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988ರಡಿಯಲ್ಲೂ ಎಫ್‌ಐಆರ್ ದಾಖಲಿಸಲಾಗಿದೆ.

ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆಕ್ಷನ್ 403 ಆಸ್ತಿಯ ದುರ್ಬಳಕೆ, ಸೆಕ್ಷನ್ 420 ವಂಚನೆ, ಸೆಕ್ಷನ್ 465 ದುಷ್ಕೃತ್ಯವೆಸಗುವುದು, ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆಕ್ಷನ್‌ 340 ಅಕ್ರಮ ಬಂಧನ, ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಹೀಗೆ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದೆ. ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಟಿಜೆ ಉಮೇಶ್ ಎಫ್‌ಐಆರ್ ದಾಖಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+