• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮುಂಡಿಬೆಟ್ಟದಲ್ಲೂ ಕಾಣಿಸಿಕೊಂಡ ಬೆಂಕಿ, 30 ಎಕರೆ ಪ್ರದೇಶ ಬೆಂಕಿಗಾಹುತಿ

|

ಮೈಸೂರು, ಫೆಬ್ರವರಿ 25: ಇತ್ತ ಬೆಂಕಿಯ ಜ್ವಾಲೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸಾವಿರಾರು ಹೆಕ್ಟೇರ್​ ಅರಣ್ಯ ಪ್ರದೇಶ ಆಹುತಿಯಾಗಿದೆ. ಇದರ ಬೆನ್ನಲ್ಲೇ ಮೈಸೂರಿನ ಚಾಮುಂಡಿ ಬೆಟ್ಟದ ಉತ್ತನಹಳ್ಳಿ ಸಮೀಪ ಕಾಡಿನಲ್ಲೂ ಬೆಂಕಿ ಕಾಣಿಸಿಕೊಂಡಿದೆ.

ಬಂಡೀಪುರಕ್ಕೆ ತೆರಳಿ ಸಹಾಯ ಮಾಡಲು ಇಚ್ಛಿಸುವವರಿಗೆ ಇಲ್ಲಿದೆ ಮಾಹಿತಿ

ಚಾಮುಂಡಿಬೆಟ್ಟದ ಸುತ್ತಮುತ್ತಲು ಅನೇಕ ಪ್ರದೇಶಗಳು ಸುಟ್ಟು ಕರಕಲಾಗಿದ್ದು, ಒಣ ಹುಲ್ಲು ಹಾಗೂ ಮರದ ತರಗೆಲೆಗಳಿಂದ ಬೆಂಕಿ ಹೊತ್ತಿ ಉರಿಯುತ್ತಿದೆ. ಸುಮಾರು 30 ಎಕರೆ ಪ್ರದೇಶ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಜೊತೆ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬಂಡೀಪುರ ಘಟನೆ ಪಾಠ ಹೇಳಿಕೊಟ್ಟಿದೆ: ಸತೀಶ್ ಜಾರಕಿಹೊಳಿ ಸಂದರ್ಶನ

ಮರಳು, ಹಸಿ ಸೊಪ್ಪುಗಳಿಂದ ಬೆಂಕಿ ನಂದಿಸಲಾಗುತ್ತಿದೆ. ಕಳೆದ ಮೂರು ವರ್ಷಗಳ ಹಿಂದೆ ಇದೇ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

ಅಷ್ಟೇ ಅಲ್ಲ, ಅಗ್ನಿಯನ್ನು ನಿಯಂತ್ರಿಸಲು ಅರಣ್ಯ ಸಿಬ್ಬಂದಿ, ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ ಹೊತ್ತು ಬೆಂಕಿಯ ಜ್ವಾಲೆ ಹೆಚ್ಚುತ್ತಿದ್ದು, ಇದರಿಂದ ಬೆಂಕಿ ನಂದಿಸಲು ಕಷ್ಟವಾಗುತ್ತಿದೆ ಎಂದು ಅರಣ್ಯ ಸಿಬ್ಬಂದಿ ಅಲವತ್ತುಕೊಂಡಿದ್ದಾರೆ.

English summary
After Bandipur another fire accident occurred at Chamundi Hills in Mysuru.30 acres destroyed by fire.Forest workers are trying to control the fire
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X