ಚಾಮುಂಡಿಬೆಟ್ಟದಲ್ಲಿ ಹೊತ್ತಿ ಉರಿದ ಹತ್ತಾರು ಎಕರೆ ಅರಣ್ಯ ಪ್ರದೇಶ
ಮೈಸೂರು, ಮಾರ್ಚ್ 18: ಮೈಸೂರಿನ ಚಾಮುಂಡಿಬೆಟ್ಟದ ಲಲಿತಾದ್ರಿಪುರ ಗ್ರಾಮದ ಸಮೀಪದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಕಾಣಿಸಿಕೊಂಡ ಬೆಂಕಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ.
ಬೆಂಕಿಯ ಕೆನ್ನಾಲಿಗೆಗೆ ಸಣ್ಣ ಪುಟ್ಟ ಮರ ಗಿಡಗಳು, ಪೊದೆಗಳು ಸಂಪೂರ್ಣ ನಾಶವಾಗಿವೆ. ಲಲಿತಾದ್ರಿಪುರ ಗ್ರಾಮದ ಸಮೀಪದಲ್ಲಿ ಅರಣ್ಯ ಹೊತ್ತಿ ಉರಿದಿದ್ದು ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ಎಷ್ಟು ಎಕರೆ ಅರಣ್ಯ ನಾಶವಾಗಿದೆ ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಅನಾಹುತ ಸಂಭವಿಸಲು ಕಾರಣವಿನ್ನೂ ತಿಳಿದು ಬಂದಿಲ್ಲ.












Click it and Unblock the Notifications