ಕರ್ನಾಟಕದಲ್ಲೇ ಮೊದಲು; ಮೈಸೂರಲ್ಲಿ ಒಳಚರಂಡಿ ಸ್ವಚ್ಛತೆಗೆ ರೊಬೋಟ್
ಮೈಸೂರು, ಜನವರಿ 29: ಮಹಾನಗರಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವುದು ದೊಡ್ಡ ಸವಾಲು. ಯಂತ್ರಗಳ ಸಹಾಯದಿಂದ ಸ್ವಚ್ಛಗೊಳಿಸಬೇಕು. ಕೆಲವು ಕಡೆ ಪೌರ ಕಾರ್ಮಿಕರು ಸ್ವಚ್ಛಗೊಳಿಸುವಾಗ ಮೃತಪಟ್ಟ ಘಟನೆಗಳು ನಡೆದಿವೆ.
ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಮೈಸೂರಿನಲ್ಲಿ ಒಳಚರಂಡಿ ಸ್ವಚ್ಛಗೊಳಿಸಲು ರೊಬೋಟ್ ಬಳಕೆ ಮಾಡಲಾಗುತ್ತದೆ. ಮೈಸೂರು ಮಹಾನಗರ ಪಾಲಿಕೆ ಇಂತಹ ವಿನೂತನ ಪ್ರಯತ್ನ ಮಾಡುತ್ತಿದೆ.
ಮಹಾನಗರ ಪಾಲಿಕೆ ಈಗಾಗಲೇ ಬ್ಯಾಂಡಿಕೂಟ್ ರೋಬೊಟ್ ಖರೀದಿಯನ್ನು ಮಾಡಿದೆ. ಶೀಘ್ರದಲ್ಲೇ ನಗರದ ಒಳಚರಂಡಿ ಸ್ವಚ್ಛಗೊಳಿಸಲು ಈ ರೊಬೋಟ್ ಬಳಕೆ ಮಾಡಲಾಗುತ್ತದೆ.

ನಗರಾಭಿವೃದ್ಧಿ ಸಚಿವರು ಶೀಘ್ರವೇ ರೊಬೋಟ್ ಸಹಾಯದಿಂದ ಒಳಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಈ ರೊಬೋಟ್ ಬಹಳ ಉಪಯುಕ್ತವಾಗಲಿದೆ.
ಇದರಿಂದಾಗಿ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾಗುವುದು. ಅವಘಡಗಳನ್ನು ತಪ್ಪಿಸಲು ಸಹಾಯಕಾರಿಯಾಗಲಿದೆ. "ಈ ಯಂತ್ರ ಅಳವಡಿಕೆಯಿಂದ ಸ್ವಚ್ಛತೆಯಲ್ಲಿ ಮತ್ತೊಂದು ಹೆಜ್ಜೆ ಮುಂದೆ ಸಾಗುತ್ತೇವೆ" ಎಂದು ಪಾಲಿಕೆ ಆಯುಕ್ತ ಗುರುದತ್ತ್ ಹೆಗ್ಡೆ ಮಾಹಿತಿ ನೀಡಿದ್ದಾರೆ.
ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ ರೊಬೋಟ್ ಈಗಾಗಲೇ ನಗರಕ್ಕೆ ಬಂದು ತಲುಪಲಿದೆ. ಒಳಚರಂಡಿ ಸ್ವಚ್ಛತೆಗೆ ರೊಬೋಟ್ ಬಳಸುತ್ತಿರುವ ಮೊದಲ ಮಹಾನಗರ ಪಾಲಿಕೆ ಎಂಬ ಕೀರ್ತಿಗೆ ಮೈಸೂರಿಗೆ ಸಿಗಲಿದೆ.
ಒಳಚರಂಡಿ ಸ್ವಚ್ಛಗೊಳಿಸಲು ಪುಣೆಯಿಂದ ಬ್ಯಾಂಡಿಕೂಟ್ ರೊಬೋಟ್ ಖರೀದಿ ಮಾಡಲಾಗಿದೆ. ಇದನ್ನು ಬಳಸುವ ಬಗ್ಗೆ ತರಬೇತಿ ನೀಡಲು ತಜ್ಞರನ್ನು ಕರೆಸಲಾಗುತ್ತಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications