• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು: ಮಣ್ಣುಮುಕ್ಕ ಹಾವನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದವರ ಬಂಧನ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 30: ಬೆಂಗಳೂರಿನಿಂದ ಮೈಸೂರಿಗೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಮಣ್ಣುಮುಕ್ಕ ಹಾವನ್ನು ರಕ್ಷಿಸಿರುವ ಅರಣ್ಯ ಸಂಚಾರಿ ದಳದ ಪೊಲೀಸರು, ಇದಕ್ಕೆ ಸಂಬಂಧಿಸಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ದೊಡ್ಡಯ್ಯ (45), ಹೇಮಂತ್ (19), ಯೋಗೇಶ್ (24), ರವಿ (35) ಹಾಗೂ ಭರಮೇಗೌಡ (23) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಿಂದ ಮೈಸೂರಿಗೆ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲೆಂದು ಕಾರಿನಲ್ಲಿ ಬರುತ್ತಿದ್ದಾಗ, ಸಿದ್ದಲಿಂಗಪುರದ ಸಮೀಪ ಅರಣ್ಯ ಸಂಚಾರಿ ದಳದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಲಾಯಿತು.

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: 10 ಲಕ್ಷ ರೂ. ಅಧಿಕ ಮೌಲ್ಯದ ಆಭರಣ ವಶ

ಈ ಹಾವನ್ನು ಮನೆಯಲ್ಲಿ ಇಟ್ಟುಕೊಂಡರೆ ಕೋಟ್ಯಾಧಿಪತಿಗಳಾಗಬಹುದೆಂದು ದುಷ್ಕರ್ಮಿಗಳು ಸುಳ್ಳು ಸುದ್ದಿ ಹಬ್ಬಿಸಿ, ಮಣ್ಣುಮುಕ್ಕ ಹಾವನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮಣ್ಣುಮುಕ್ಕ ಹಾವು ರಕ್ಷಣಾ ಕಾರ್ಯಾಚರಣೆಯನ್ನು ಆರ್‌ಎಫ್‌ಒ ವಿವೇಕ್ ನೇತೃತ್ವದಲ್ಲಿ ಸಿಬ್ಬಂದಿಯಾದ ಲಕ್ಷ್ಮೀಶ, ಮೋಹನ್, ಮಹಂತೇಶ್ ನಾಯಕ, ಕೊಟ್ರೇಶ್, ರವಿಕುಮಾರ್, ರವಿನಂದನ್, ಮಧು, ಪುಟ್ಟಸ್ವಾಮಿ, ವಿರೂಪಾಕ್ಷ ಇದ್ದರು.

English summary
Forest Police have arrested five accused of Smuggling Sand Boa from Bengaluru to Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X