ಮೈಸೂರಿನಲ್ಲಿ ಚುನಾವಣಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಫ್ಲೆಕ್ಸ್ ತೆರವು
ಮೈಸೂರು, ಮಾರ್ಚ್ 29 : ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್ ಗಳನ್ನು ಪಾಲಿಕೆಯ ಸಿಬ್ಬಂದಿ ತೆರವುಗೊಳಿಸಿದರು.
ಜಾಹೀರಾತು ಫಲಕ, ಸರ್ಕಾರದ ಯೋಜನೆಗಳ ದೃಶ್ಯವನ್ನು ಹೊಂದಿರುವ ಪ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣ, ತಾಲ್ಲೂಕು ಕಚೇರಿ ಆವರಣ, ಆರ್ಟಿಒ ಕಚೇರಿ ಆವರಣ, ನ್ಯಾಯಾಲಯದ ಮುಂಭಾಗ, ಜಿಪಂ ಕಚೇರಿ ಆವರಣ ಹಾಗೂ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ್ದ ಸರ್ಕಾರಿ ಜಾಹೀರಾತುಗಳ ಫಲಕಗಳನ್ನು ತೆರವುಗೊಳಿಸಿದ್ದು, ಕೆಲವು ಜಾಹೀರಾತು ಫಲಕಗಳ ಮೇಲೆ ಅಂಟಿಸಿದ್ದ ಪೋಸ್ಟರ್ ಗಳನ್ನು ಕಿತ್ತು ಹಾಕಲಾಗಿದೆ.

ಪಾಲಿಕೆ ಅಭಯ ಕ್ಷಿಪ್ರ ಪಡೆ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದ ಪ್ಲೆಕ್ಸ್ ಗಳ ಜತೆಗೆ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದೆ.

ಶಸ್ತ್ರಾಸ್ತ್ರ ಒಪ್ಪಿಸಲು ಮನವಿ:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮೇ 12ರಂದು ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಸ್ತ್ರಾಸ್ತ್ರ ಕಾಯ್ದೆಯಡಿ ಶಸ್ತ್ರಾಸ್ತ್ರ ರಹದಾರಿ ಹೊಂದಿರುವವರು ಚುನಾವಣಾ ಪಕ್ರಿಯೆ ಮುಗಿಯುವವರೆಗೆ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಒಪ್ಪಿಸುವಂತೆ ಜಿಲ್ಲಾ ದಂಡಾಧಿಕಾರಿಯೂಆದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications