ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಚುನಾವಣಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಫ್ಲೆಕ್ಸ್ ತೆರವು

By Yashaswini
|
Google Oneindia Kannada News

ಮೈಸೂರು, ಮಾರ್ಚ್ 29 : ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್ ಗಳನ್ನು ಪಾಲಿಕೆಯ ಸಿಬ್ಬಂದಿ ತೆರವುಗೊಳಿಸಿದರು.

ಜಾಹೀರಾತು ಫಲಕ, ಸರ್ಕಾರದ ಯೋಜನೆಗಳ ದೃಶ್ಯವನ್ನು ಹೊಂದಿರುವ ಪ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣ, ತಾಲ್ಲೂಕು ಕಚೇರಿ ಆವರಣ, ಆರ್‍ಟಿಒ ಕಚೇರಿ ಆವರಣ, ನ್ಯಾಯಾಲಯದ ಮುಂಭಾಗ, ಜಿಪಂ ಕಚೇರಿ ಆವರಣ ಹಾಗೂ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ್ದ ಸರ್ಕಾರಿ ಜಾಹೀರಾತುಗಳ ಫಲಕಗಳನ್ನು ತೆರವುಗೊಳಿಸಿದ್ದು, ಕೆಲವು ಜಾಹೀರಾತು ಫಲಕಗಳ ಮೇಲೆ ಅಂಟಿಸಿದ್ದ ಪೋಸ್ಟರ್ ಗಳನ್ನು ಕಿತ್ತು ಹಾಕಲಾಗಿದೆ.

Flex removed in Mysuru by electrol officers

ಪಾಲಿಕೆ ಅಭಯ ಕ್ಷಿಪ್ರ ಪಡೆ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದ ಪ್ಲೆಕ್ಸ್ ಗಳ ಜತೆಗೆ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದೆ.

Flex removed in Mysuru by electrol officers

ಶಸ್ತ್ರಾಸ್ತ್ರ ಒಪ್ಪಿಸಲು ಮನವಿ:

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮೇ 12ರಂದು ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಸ್ತ್ರಾಸ್ತ್ರ ಕಾಯ್ದೆಯಡಿ ಶಸ್ತ್ರಾಸ್ತ್ರ ರಹದಾರಿ ಹೊಂದಿರುವವರು ಚುನಾವಣಾ ಪಕ್ರಿಯೆ ಮುಗಿಯುವವರೆಗೆ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಒಪ್ಪಿಸುವಂತೆ ಜಿಲ್ಲಾ ದಂಡಾಧಿಕಾರಿಯೂಆದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ

English summary
As model electoral code of conduct is implemented all over Karnataka for Karnataka assembly elections many Flex are removed in Mysuru by electrol officers. The date of elections is scheduled on May 12th and Results will be declared on May 15th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X