'ಮುಂಜಾಗ್ರತೆ ವಹಿಸಿದ್ದರೆ ಬಂಡೀಪುರ ಬೆಂಕಿ ಅವಘಡ ತಡೆಯಬಹುದಿತ್ತು'

ಮೈಸೂರು, ಫೆಬ್ರವರಿ 25: ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಬಂಡೀಪುರದಲ್ಲಿ ಬೆಂಕಿ ಅವಘಡ ಸಂಭವಿಸುತ್ತಿರಲಿಲ್ಲ ಎಂದು ಚಾಮರಾಜನಗರ ಸಂಸದ ಧೃವನಾರಾಯಣ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಬಂಧ ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಕೈಗೊಂಡಿದ್ದರೆ ಘಟನೆ ತಪ್ಪಿಸಬಹುದಿತ್ತು. ಬಂಡೀಪುರ ಅರಣ್ಯ ಪ್ರದೇಶಲ್ಲಿ ಈ ರೀತಿ ಘಟನೆ ನಡೆಯಬಾರದಿತ್ತು. ಘಟನೆ ಸಂಬಂಧ ತನಿಖೆ ಮೂಲಕ ಸತ್ಯ ಬಯಲಾಗಬೇಕಿದೆ ಎಂದರು.

Forest department did not take precautionary:MP Dhruvanarayan

ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

ಈಗಾಗಲೇ ಅರಣ್ಯ ಸಚಿವ ಜಾರಕಿಹೊಳಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಇಂದು ಕೂಡ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಾನು ಕೂಡ ಸಭೆಯಲ್ಲಿ ಭಾಗವಹಿಸುತ್ತೇನೆ. ಅರಣ್ಯದಲ್ಲಿ ಬೆಂಕಿ ನಂದಿಸಲು ಎಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಲಿಕಾಪ್ಟರ್ ಮೂಲಕ ನೀರು ಹಾಕುವ ಸಂಬಂಧ ಚರ್ಚೆ ಮಾಡಲಾಗುವುದು. ದೇಶದಲ್ಲಿ ಅತಿ ಹೆಚ್ಚು ಹುಲಿ ಸಂಸತಿ ಹೊಂದಿರುವ ಪ್ರದೇಶ ಬಂಡಿಪುರ ರಾಷ್ಟ್ರೀಯ ಉದ್ಯಾನವನ. ಹೀಗಾಗಿ ನಾವು ಬಂಡಿಪುರ ಅರಣ್ಯ ಪ್ರದೇಶ ಸಂರಕ್ಷಿಸಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+