• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳಿಗಾಗಿ ಅರಣ್ಯ ಇಲಾಖೆಯಿಂದ ಹುಡುಕಾಟ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್‌, 14: ಇತ್ತೀಚಿಗೆ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಹೆಣ್ಣು ಹುಲಿಗೆ ಮೂರು ಮರಿಗಳಿದ್ದವು ಎನ್ನುವುದು ಗೊತ್ತಾಗಿದೆ. ಇದೀಗ ಹುಲಿ ಮರಿಗಳ ಪತ್ತೆಗೆ ಅರಣ್ಯ ಇಲಾಖೆ ಮುಂದಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಜಮೀನಿನಲ್ಲಿ ಅಳವಡಿಸಿದ್ದ ಉರುಳಿಗೆ 12 ವರ್ಷದ ಹೆಣ್ಣು ಹುಲಿ ಮೃತಪಟ್ಟಿತ್ತು.

ಇದೀಗ ಎಚ್.ಡಿ.ಕೋಟೆಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ಹುಲಿಯ ಮೃತದೇಹ ಪತ್ತೆ ಆಗಿದ್ದು, ಹುಲಿ ಮರಿಗಳಿಗಾಗಿ ಕಾರ್ಯಚರಣೆ ಶುರುವಾಗಿದೆ. ಪುಟ್ಟ ಮರಿಗಳಾದ ಕಾರಣ ಇವುಗಳು ಹಸಿವಿನಿಂದ ಸಾಯಬಹುದು ಅಥವಾ ಜಾನುವಾರು, ಜನರು ಬೇಟೆ ಆಡಬಹುದು ಎನ್ನುವ ಆತಂಕವೂ ಎದುರಾಗಿದೆ.

ಸದ್ಯ ಮತ್ತಿಗೂಡು ಆನೆ ಶಿಬಿರದ ಭೀಮ ಮತ್ತು ಅಭಿಮನ್ಯು ಸೇರಿದಂತೆ 4 ಸಾಕಾನೆಗಳೊಂದಿಗೆ ಭಾನುವಾರ ಬೆಳಗ್ಗೆಯಿಂದ ಅರಣ್ಯ ಸಿಬ್ಬಂದಿ ಕೂಂಬಿಂಗ್ ಪ್ರಾರಂಭಿಸಿದ್ದಾರೆ. ಹುಲಿ ಹೆಜ್ಜೆಗುರುತು ಪತ್ತೆಯಾದ ಮೂರು ಕಡೆ ಬೋನ್ ಇರಿಸಲಾಗಿದೆ. ಅಲ್ಲದೇ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ಅಕ್ಕಿ ಹೆಬ್ಬಾಳಿನಲ್ಲಿ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಕೆರೆಗೆ ಬಿದ್ದು ಸಾವುಅಧಿಕಾರಿಗಳ ನಿರ್ಲಕ್ಷ್ಯ: ಅಕ್ಕಿ ಹೆಬ್ಬಾಳಿನಲ್ಲಿ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಕೆರೆಗೆ ಬಿದ್ದು ಸಾವು

ನಾಯಂಜಿ ಕಟ್ಟೆ ಹುಲಿ
ಅಂತರಸಂತೆಯ ನಾಯಂಜಿ ಕಟ್ಟೆ ಬಳಿ ಹುಲಿ ಯಾವಾಗಲೂ ಕಾಣಿಸಿಕೊಳ್ಳುತ್ತಿತ್ತು. ಹಾಗಾಗಿ ಈ ಹುಲಿಗೆ ಪ್ರವಾಸಿಗರು ನಾಯಂಜಿ ಕಟ್ಟೆ ಹುಲಿ ಎಂದು ಕರೆಯುತ್ತಿದ್ದರು. ''ಹುಲಿ ಮರಿಗಳ ಪತ್ತೆಗೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಇದಕ್ಕಾಗಿ ನಾಲ್ಕು ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. ಅಲ್ಲದೆ ಕ್ಯಾಮೆರಾ ಕೂಡ ಅಳವಡಿಸಲಾಗಿದೆ. ಆದರೆ ಕ್ಯಾಮೆರಾದಲ್ಲಿ ಮರಿಗಳ ಚಹರೆ ಕಂಡು ಬಂದಿಲ್ಲ,'' ಎಂದು ವನ್ಯಜೀವಿ ಪರಿಪಾಲಕಿ ಕೃತಿಕಾ ಆಲನಹಳ್ಳಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಹುಣಸೂರು ವನ್ಯಜೀವಿ ಉಪ ವಿಭಾಗದ ಡಿಸಿಎ ಡಾ.ಹರ್ಷವರ್ಧನ್ ನರಗುಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ, ಅಂತರಸಂತೆ, ಮೇಟಿಕುಪ್ಪೆ ಹಾಗೂ ಡಿ.ಬಿ.ಕುಪ್ಪೆ ಅರಣ್ಯ ರಕ್ಷಕರು ಭಾಗವಹಿಸಿದ್ದರು.

ಬೃಂದಾವನಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

ಬೃಂದಾವನಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

ವಿಶ್ವವಿಖ್ಯಾತ ಕೆಆರ್‌ಎಸ್ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡು ಅಲ್ಲಿನ ಪ್ರವಾಸಿಗರಿಗೆ ಆತಂಕ ಸೃಷ್ಟಿಸಿತ್ತು. ಇದೀಗ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ. ಮುಂಜಾಗ್ರತೆಯಾಗಿ ಬೃಂದಾವನಕ್ಕೆ ಪ್ರವಾಸಿಗರ ನಿಷೇಧವನ್ನು ಮುಂದುವರೆಸಿದೆ. ನಾರ್ತ್‌ಬ್ಯಾಂಕ್ ಬಳಿ ಬೆಳೆದು ನಿಂತಿದ್ದ ಗಿಡ-ಗಂಟೆಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆದಿದೆ.

ಅಕ್ಟೋಬರ್‌ 22ರಂದು ಕೆಆರ್‌ಎಸ್ ಅಣೆಕಟ್ಟಿನ ಮೇಲ್ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿತ್ತು. ಮತ್ತೆ ಅಕ್ಟೋಬರ್‌ 28ರಂದು ಸಂಜೆ ಬೃಂದಾವನದೊಳಗೆ ಚಿರತೆ ಕಾಣಿಸಿಕೊಂಡು ಪ್ರವಾಸಿಗರಲ್ಲಿ ಮತ್ತಷ್ಟು ಭಯ ಹುಟ್ಟುವಂತೆ ಮಾಡಿತ್ತು. ಚಿರತೆ ಕಾಣಿಸಿಕೊಂಡಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದರಿಂದ ಪ್ರವಾಸಿಗರಿಗೆ ಬೃಂದಾವನ ಪ್ರವೇಶವನ್ನು ನಿಷೇಧಿಸಲಾಗಿತ್ತು.

ಚಿರತೆಯ ಹೆಜ್ಜೆ ಗುರುತುಗಳ ಪರಿಶೀಲನೆ

ಚಿರತೆಯ ಹೆಜ್ಜೆ ಗುರುತುಗಳ ಪರಿಶೀಲನೆ

ನಂತರದಲ್ಲಿ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಬೃಂದಾವನದ ಉತ್ತರ ಮತ್ತು ದಕ್ಷಿಣ ದ್ವಾರದ ಮಾರ್ಗಗಳಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದರು. ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಬೋನನ್ನು ಇರಿಸಿ ನಾಯಿಯೊಂದನ್ನು ಕಟ್ಟಿಹಾಕಿ ಚಿರತೆ ಸೆರೆಗೆ ಕಾದುಕುಳಿತಿದ್ದರು. ಆದರೆ ಇದುವರೆಗೂ ಕೂಡ ಚಿರತೆ ಬೋನಿನ ಬಳಿ ಸುಳಿಯಲೇ ಇಲ್ಲ.

ಮೊದಲು ದಕ್ಷಿಣ ದ್ವಾರದ ಬಳಿ ಕಾಣಿಸಿಕೊಂಡಿದ್ದ ಚಿರತೆ ಅಕ್ಟೋಬರ್‌ 28ರಂದು ಉತ್ತರ ಬೃಂದಾವನ ಬಳಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದ್ದರಿಂದ ಅಲ್ಲಿಯೂ ಸಹ ಒಂದು ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯವರು ನಡೆಸಿದ್ದರು. ಆದರೆ ಅದು ಫಲ ನೀಡಲೇ ಇಲ್ಲ.

ತಮಿಳುನಾಡಿನಲ್ಲಿ ಪತ್ತೆಯಾದ ಮಂಡ್ಯದ ವಿಷ್ಣು ವಿಗ್ರಹದ ಹಿಂದಿನ ಕಥೆ, ಪೊಲೀಸರು ಹೇಳಿದ್ದೇನು?ತಮಿಳುನಾಡಿನಲ್ಲಿ ಪತ್ತೆಯಾದ ಮಂಡ್ಯದ ವಿಷ್ಣು ವಿಗ್ರಹದ ಹಿಂದಿನ ಕಥೆ, ಪೊಲೀಸರು ಹೇಳಿದ್ದೇನು?

ಅಡ್ಡಿಯಾಗಿದ್ದ ಗಿಡಗಳ ತೆರವು ಕಾರ್ಯಾಚರಣೆ

ಅಡ್ಡಿಯಾಗಿದ್ದ ಗಿಡಗಳ ತೆರವು ಕಾರ್ಯಾಚರಣೆ

ಚಿರತೆ ಚಲನವಲನದ ಮೇಲೆ ನಿಗಾ ಇಡಲು ಹತ್ತು ಕಡೆಗಳಲ್ಲಿ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಲಾಯಿತು. ಕೂಂಬಿಂಗ್ ಕಾರ್ಯಾಚರಣೆಗೆ ಅಡ್ಡಿಯಾಗಿದ್ದ ಗಿಡ-ಗಂಟೆಗಳನ್ನೆಲ್ಲಾ ದಕ್ಷಿಣ ದ್ವಾರದ ಬಳಿ ತೆರವುಗೊಳಿಸಿದ್ದರು. ಆದರೂ ಚಿರತೆ ಮಾತ್ರ ಎಲ್ಲಿಯೂ ಕಾಣಸಿಗಲೇ ಇಲ್ಲ.

ಕೊನೆಗೆ ಕಾವೇರಿ ನೀರಾವರಿ ನಿಗಮ ಹಾಗೂ ಅರಣ್ಯ ಇಲಾಖೆಯವರು ಸಭೆ ನಡೆಸಿ ಡ್ರೋನ್ ಕ್ಯಾಮೆರಾ ಬಳಸಿ ಚಿರತೆಯ ಇರುವಿಕೆಯ ಜಾಗ ಪತ್ತೆ ಹಚ್ಚುವುದರೊಂದಿಗೆ ಸೆರೆಹಿಡಿಯುವ ಕಾರ್ಯಾಚರಣೆಯ ನಿರ್ಧಾರವನ್ನು ಕೈಗೊಂಡರು. ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಗೆ ವನ್ಯಜೀವಿ ವಲಯದವರ ನೆರವನ್ನು ಪಡೆಯುವುದಕ್ಕೂ ತೀರ್ಮಾನಿಸಲಾಗಿತ್ತು. ಆದರೆ ಸಭೆ ನಡೆಸಿ ಕೈಗೊಂಡ ತೀರ್ಮಾನದಂತೆ ಯಾವುದೂ ಜಾರಿಯಾಗಲೇ ಇಲ್ಲ.

ಅ. 28ರಂದು ಪ್ರತ್ಯಕ್ಷ ಆಗಿದ್ದ ಚಿರತೆ

ಅ. 28ರಂದು ಪ್ರತ್ಯಕ್ಷ ಆಗಿದ್ದ ಚಿರತೆ

ಕಳೆದ ನಾಲ್ಕು ದಿನಗಳಿಂದಲೂ ಕೆಆರ್‌ಎಸ್‌ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಬೃಂದಾವನದಲ್ಲಿದೆಯೋ ಇಲ್ಲವೋ? ಗೊತ್ತಿಲ್ಲ ಎಂದು ಅಲ್ಲಿನ ಅಧಿಕಾರಿಗಳದ್ದಾಗಿದೆ. ಅಕ್ಟೋಬರ್‌ 28ರಂದು ಪ್ರತ್ಯಕ್ಷವಾಗಿದ್ದ ಚಿರತೆ ಇದುವರೆಗೂ ಎಲ್ಲಿಯೂ ಸಹ ಕಾಣಿಸಿಕೊಂಡಿಲ್ಲ. ಚಿರತೆ ಇನ್ನೂ ಬೃಂದಾವನದಲ್ಲೇ ಇದೆಯೋ ಅಥವಾ ಕಾಡಿಗೆ ಮರಳಿದೆಯೋ? ಎನ್ನುವ ಮಾಹಿತಿಯೂ ಇಲ್ಲದಂತಾಗಿದೆ. ಕಳೆದ 16 ದಿನಗಳಿಂದ ಚಿರತೆ ಕೆಆರ್‌ಎಸ್ ಸುತ್ತಮುತ್ತ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆ ಚಿರತೆ ಅಲ್ಲಿಂದ ವಾಪಸ್ ತೆರಳಿರುವ ಸಾಧ್ಯತೆಗಳಿವೆ ಎಂದು ಅರಣ್ಯ ಇಲಾಖೆಯವರು ನಂಬಿದ್ದಾರೆ. ಅದೇ ಕಾರಣಕ್ಕೆ ವ್ಯರ್ಥ ಕಾರ್ಯಾಚರಣೆ ನಡೆಸದೆ ಸುಮ್ಮನಾಗಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯ ಇಲಾಖೆಗೆ ಸವಾಲಾದ ಚಿರತೆ ಸೆರೆ

ಅರಣ್ಯ ಇಲಾಖೆಗೆ ಸವಾಲಾದ ಚಿರತೆ ಸೆರೆ

ಸಂತಾನಾಭಿವೃದ್ಧಿ ಕಾರಣದಿಂದ ಒಮ್ಮೊಮ್ಮೆ ಚಿರತೆಗಳು ಅರಣ್ಯದ ಹೊರಗೆ ಕಾಣಿಸಿಕೊಳ್ಳುತ್ತವೆ. ಚಿರತೆಗಳು ಆಹಾರವನ್ನು ಹುಡುಕಲು ಸುಲಭವಾಗುವುದರಿಂದ ಹಳ್ಳಿಗಳು, ಪಟ್ಟಣದ ಕಡೆಗಳಲ್ಲಿ ಅಲೆದಾಡುತ್ತವೆ. ನಂತರ ಕಾಡಿಗೆ ವಾಪಸಾಗುವ ನಿದರ್ಶನಗಳೂ ಇವೆ. ಹಾಗೆಯೇ ಕೆಆರ್‌ಎಸ್‌ನಲ್ಲಿ ಕಾಣಿಸಿಕೊಂಡಿರುವ ಚಿರತೆ ಆಹಾರ ಹುಡುಕಿಕೊಂಡು ಬಂದು ಕೆಲ ದಿನಗಳ ಬಳಿಕ ವಾಪಸಾಗಿರಬಹುದೆಂದು ಹೇಳಲಾಗುತ್ತಿದೆ.

English summary
After Tigress death in Nagarhole National Park. Forest department in search for three tiger cubs, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X