ಕೆಪಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದ ಅರಣ್ಯ ಸಚಿವ ಆರ್. ಶಂಕರ್
ಮೈಸೂರು, ಅಕ್ಟೋಬರ್. 5: ಕೆಪಿಜೆಪಿ ಪಕ್ಷದಲ್ಲಿಯೇ ಮುಂದುವರಿಯುತ್ತೇನೆ ಎಂದು ಹೇಳಿದ್ದ ಅರಣ್ಯ ಸಚಿವ ಆರ್.ಶಂಕರ್ ಈಗ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದೇನೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ. ಆದರೆ ಸಚಿವ ಸಂಪುಟದಲ್ಲಿಯೇ ಇರುತ್ತೇನೆ. ಸಂಪುಟ ವಿಸ್ತರಣೆ ಹಾಗೂ ಖಾತೆ ಬದಲಾವಣೆ ವಿಚಾರ ಗಮನಕ್ಕೆ ಬಂದಿಲ್ಲ.
ಆ ಬಗ್ಗೆ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಮಾಧ್ಯಮಗಳು ಕೆಲವು ಗೊಂದಲಗಳನ್ನು ಸೃಷ್ಟಿಸಿದ್ದವು. ಹೀಗಾಗಿ ನಾನೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಕೆಲವು ದಿನಗಳ ಹಿಂದೆಯಷ್ಟೇ ರಮೀಳಾ ಉಮಾಂಶಕರ್ ಅವರು ಬಿಬಿಎಂಪಿ ಉಪಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.












Click it and Unblock the Notifications