ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿ.ಸಿ ಪಾಟೀಲ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 4: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ರನ್ನು ಮಾಜಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತ ವಿರೋಧಿ ಹೇಳಿಕೆಯನ್ನು ಖಂಡನೀಯವಾಗಿದೆ. ರೈತರು ಸ್ವಾಭಿಮಾನಿಗಳಾಗಿದ್ದು, ಅವರನ್ನು ಸಂಕಷ್ಟಕ್ಕೆ ದೂಡಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಟ್ಟರ್ ಖಾತೆಯಲ್ಲಿ ಕಿಡಿಕಾರಿದ್ದಾರೆ.

Mysuru: Former CM Siddaramaiah Has Outrage About Minister BC Patil Statement

 "ಸೋತು ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು"

ಬಿ.ಸಿ ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ತಮಗೆ ಒಂದು ಕ್ಷಣವೂ ಕೃಷಿ ಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಹದಿಂದ ಸರ್ವಸ್ವವನ್ನೂ ಕಳೆದುಕೊಂಡು ಬೀದಿಪಾಲಾಗಿರುವ ರೈತರ ಗಾಯದ ಮೇಲೆ ಬರೆ ಎಳೆದಂತೆ ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನು ತಿನ್ನುತ್ತೀರಾ? ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ.

ರೈತ ವಿರೋಧಿ, ರೈತ ವಿನಾಶಕಾರಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನು ಆತ್ಮಹತ್ಯೆಗೆ ದೂಡಲು ಹೊರಟಿರುವವರು ಯಾರು? ನ್ಯಾಯಕ್ಕಾಗಿ ಹೋರಾಡುತ್ತಿರುವ ಸ್ವಾಭಿಮಾನಿ ರೈತರ ಮೇಲೆ ಲಾಠಿಯೇಟು, ಅಶ್ರುವಾಯು, ಜಲಫಿರಂಗಿಗಳ ಮೂಲಕ ದೌರ್ಜನ್ಯವೆಸಗುತ್ತಿರುವ ಕೊಲೆಗಡುಕ ಮನಸ್ಸು ಯಾರದು ಬಿ.ಸಿ ಪಾಟೀಲ್? ಎಂದು ಟ್ವಿಟರ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

English summary
Former CM Siddaramaiah has expressed outrage against agriculture minister BC Patil statement has said that farmers who commit suicide are cowards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X