ಸಿಎಂ ಬದಲಾದ್ರೆ ಅಜೆಂಡಾ ಬದಲಾಗುತ್ತಾ?: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಮೈಸೂರು, ಜುಲೈ 28: "ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ್ದಿದ್ದು, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಹಾಗೆಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ?,'' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, "ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ,'' ಎಂದರು.
"ಬಿಜೆಪಿ ಸರ್ಕಾರದಿಂದ ಯಾವುದೇ ನಿರೀಕ್ಷೆ ಮಾಡುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಅವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಒಳ್ಳೆಯ ಆಡಳಿತ ನೀಡಲಿ,'' ಎಂದು ಹೇಳಿದರು.

"ಅಲ್ಲದೇ ತಂದೆ ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮನಾಗಲಿಲ್ಲ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ,'' ಎಂದು ಹೇಳಿದರು.
"ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾ? ಎಂದು ಪ್ರಶ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಹೆಸರನ್ನು ಸೂಚಿಸಿರುವುದು ಯಡಿಯೂರಪ್ಪ, ಸರ್ಕಾರದ ಮೇಲೆ ಬಿಎಸ್‌ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾ?,'' ಎಂದರು.
"ಆದರೆ ಈ ಕ್ಷಣದಲ್ಲೆ ನಾನು ಬೊಮ್ಮಯಿ ಬಗ್ಗೆ ಏನು ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ,'' ಎಂದು ಹೇಳಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications