ಐಎಂಎ ಪ್ರಕರಣ; ರೋಷನ್ ಬೇಗ್ ಗೆ ಸಿದ್ದರಾಮಯ್ಯ ತಿರುಗೇಟು

Recommended Video

      ಜ್ಯುವೆಲರಿ ಹಗರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೇಳೋದೇನು? | Oneindia Kannada

      ಮೈಸೂರು, ಜೂನ್ 13: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನನ್ನನ್ನು ಸುಮ್ಮನೆ ಸಿಲುಕಿಸಿದ್ದಾರೆ ಎಂಬ ಶಾಸಕ ರೋಷನ್ ಬೇಗ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ವಿಷಯವನ್ನು ಮಾಧ್ಯಮದ ಮುಂದೆ ಹೇಳುವ ಬದಲು ಎಸ್‌ಐಟಿ ಮುಂದೆ ಹೇಳಪ್ಪ ಎಂದು ಟೀಕಿಸಿದ್ದಾರೆ.

      ಐಎಂಎ ವಂಚನೆ ಪ್ರಕರಣದ ವಿಚಾರಣೆಗಾಗಿ ವಿಶೇಷ ತನಿಖಾ ದಳವನ್ನು ರಚಿಸಲಾಗಿದೆ. ಎಸ್.ಐ.ಟಿ ಸಂಪೂರ್ಣವಾಗಿ ತನಿಖೆ ನಡೆಸಲಿದೆ. ಆ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡೋಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

      ನೋಡಿ ನಾವು ಎಂಥ ಪರಿಸ್ಥಿತಿಯಲ್ಲಿದ್ದೇವೆ? ಸತ್ಯ ಹೇಳಲಾಗದಂಥ ಕಷ್ಟದ ಪರಿಸ್ಥಿತಿ ನಮ್ಮದು. ಮೋದಿ ಮತ್ತು ಅಮೀತ್ ಷಾ ವಿಚಾರದಲ್ಲಿ ಸತ್ಯ ಹೇಳುವಂತಿಲ್ಲ. ಪುಲ್ವಾಮಾ ಘಟನೆ ಬಗ್ಗೆ ಪ್ರಶ್ನೆ ಕೇಳುವಂತಿಲ್ಲ. ನೋಡಿ ನಮ್ಮ ಪರಿಸ್ಥಿತಿ ಹೇಗಿದೆ! ಎಂದು ವ್ಯಂಗ್ಯವಾಗಿ ಹೇಳಿದರು.

      former cm siddaramaiah reaction to roshan beig in ima case

      ನರೇಂದ್ರ ಮೋದಿ ಒಬ್ಬರೇ ದೇಶಭಕ್ತ ಎಂಬಂತೆ ಬಿಂಬಿಸಲಾಯಿತು. ಮಾಧ್ಯಮಗಳು ಸೇರಿದಂತೆ ಎಲ್ಲರೂ ಮೋದಿ ಮೋದಿ ಎಂದರು. ಆದ್ರೆ ಈಗ ನೋಡಿ, ದೇಶದ ಜಿಡಿಪಿ ಎಷ್ಟು ಕುಸಿದಿದೆ ಅಂತ. ಇದನ್ನು ಕೂಡ ನಾವು ಪ್ರಶ್ನೆ ಮಾಡಬಾರದಾ? ಸಂವಿಧಾನದಲ್ಲಿ ನಮಗೆ ಪ್ರಶ್ನೆ ಮಾಡುವ ಹಕ್ಕಿಲ್ಲವೇ? ಎಂದು ಕುಟುಕಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+