ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಸೀಲ್ ಡೌನ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 04: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಅವರ ಮೈಸೂರು ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ.

ಇತ್ತೀಚಿಗೆ ಮೈಸೂರಿಗೆ ಆಗಮಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಟಿ.ಕೆ ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸಿದ್ದರಾಮಯ್ಯ ಅವರ ನಿವಾಸದ ಸುತ್ತಮುತ್ತ ಸೀಲ್ ಡೌನ್ ಮಾಡಿದ್ದು, ಮುಂದಿನ 14 ದಿನಗಳು ಸಿದ್ದರಾಮಯ್ಯ ಅವರ ನಿವಾಸವನ್ನು ಸಂಪೂರ್ಣ ಬಂದ್ ಆಗಲಿದೆ. ಅಲ್ಲದೇ ಸಿದ್ದರಾಮಯ್ಯ ಅವರ ನಿವಾಸದ ಸುತ್ತಮುತ್ತ ಪಾಲಿಕೆ ವತಿಯಿಂದ ಔಷಧಿ ಸಿಂಪಡಣೆ ಮಾಡಲಾಗಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜು.30 ರಂದು ಜಿಲ್ಲಾ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂವಾದದಲ್ಲಿ ಮೈಸೂರಿನ ಹಲವು ಮಂದಿ ವರದಿಗಾರರು, ಛಾಯಾಗ್ರಾಹಕರು ಪಾಲ್ಗೊಂಡಿದ್ದರು. ಈ ನಡುವೆ ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರು ಸೆಲ್ಫ್ ಕ್ವಾರಂಟೈನ್ ಆಗುವಂತೆ ಕೋರಿ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್‍ ಬಾಬು ಅವರು ಆಡಿಯೋ ಸಂದೇಶ ರವಾನಿಸಿದ್ದಾರೆ.

Mysuru: Former CM Siddaramaiah Residence Sealdown

ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ನಗರದ ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿರುವ ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡಕ್ಕೆ ಸ್ಯಾನಿಟೈಸ್ ಮಾಡಿ, ಸಂಘದ ಕಟ್ಟಡವನ್ನು ಬಂದ್ ಮಾಡಲಾಗಿದೆ.

ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ಜು.31 ರಂದು ಮಂಡ್ಯದಲ್ಲಿ ಸಹ ಪತ್ರಿಕಾಗೋಷ್ಠಿ ನಡೆಸಿದ್ದರು. ಹೀಗಾಗಿ ಮಂಡ್ಯ ಪತ್ರಕರ್ತರ ವಲಯದಲ್ಲೂ ಕೊರೊನಾ ವೈರಸ್ ಭೀತಿ ಎದುರಾಗಿದ್ದು, ಇನ್ನಷ್ಟೇ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

English summary
Former chief minister Siddaramaiah has confirmed the coronavirus positive, his Mysuru residence has been sealdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X