ಇಂದಿನಿಂದ (ಫೆ.18) ಮೂರು ದಿನಗಳ ಕಾಲ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು, ಫೆಬ್ರವರಿ 18: ಇತ್ತೀಚಿಗೆ ದೆಹಲಿ ಪ್ರವಾಸ ಕೈಗೊಂಡು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಫೆ.18 ರಿಂದ 20ರವರೆಗೆ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಗುರುವಾರ ಮಧ್ಯಾಹ್ನ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿಗೆ ಆಗಮಿಸಲಿರುವ ಅವರು, ಸಂಜೆ 4:30ಕ್ಕೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಫೆ.19ರಂದು ಕೆ.ಆರ್.ನಗರ ಹಾಗೂ ಹುಣಸೂರು ತಾಲ್ಲೂಕು ಪ್ರವಾಸ ನಡೆಸಲಿರುವ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11ಕ್ಕೆ ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿಯಲ್ಲಿ ನಡೆಯುವ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Mysuru: Former CM Siddaramaiah Tours Mysuru For Three Days From Feb. 18

ನಂತರ ಸಂಜೆ 4:30ಕ್ಕೆ ಹುಣಸೂರಿನಲ್ಲಿ ನಡೆಯುವ ಸ್ಥಳೀಯ ಶಾಸಕ ಎಚ್.ಪಿ.ಮಂಜುನಾಥ್ ಅವರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಮೈಸೂರಿಗೆ ಹಿಂದಿರುಗಿ ವಾಸ್ತವ್ಯ ಹೂಡಿಲಿದ್ದಾರೆ.

ಫೆ.20ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆಯುವ ಪತ್ರಿಕಾ ಛಾಯಾಗ್ರಹಕರ ಸಂಘದ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ನಂತರ ಪಿರಿಯಾಪಟ್ಟಣಕ್ಕೆ ತೆರಳಲಿರುವ ಅವರು, ಗ್ರಾಮ ಪಂಚಾಯತಿಗೆ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ಹಿಂದಿರುಗಲಿರುವ ಅವರು, ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+